ಬೆಂಗಳೂರು
ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಪಾನಮತ್ತ ಕಿಡಿಗೇಡಿಗಳು ಗಲಾಟೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಪೊಲೀಸರಿಗೆ ಆವಾಜ್ ಹಾಕಿರುವ ದುರ್ಘಟನೆ ಇಂದಿರಾನಗರ 100 ಅಡಿ ರಸ್ತೆಯಲ್ಲಿ ನಡೆದಿದೆ.
ಇಂದಿರಾನಗರ 100 ಅಡಿ ರಸ್ತೆಯಲ್ಲಿ ಯುವಕರು ಕುಡಿದು ಹೊಸವರ್ಷ ಆಚರಣೆ ಮಾಡಿದ್ದಾರೆ. ಕುಡಿದು ರಸ್ತೆಯಲ್ಲಿ ಗಲಾಟೆ ಮಾಡುತ್ತಿದ್ದನ್ನು ಪ್ರಶ್ನಿಸಿದ ಪೊಲೀಸರಿಗೆ ಅವಾಜ್ ಹಾಕಿದ್ದಾರೆ.
ಸಂಭ್ರಮಾಚರಣೆಯ ವೇಳೆ ಕೆಲ ಯುವಕರು ಸಾಕಷ್ಟು ಪಾನಮತ್ತರಾಗಿದ್ದರು. ಪಾನಮತ್ತರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಮುನ್ನ ಅವರಲ್ಲಿ ಮನವಿ ಮಾಡಿಕೊಳ್ಳಿ ಪೆÇಲೀಸ್ ಆಯುಕ್ತರು ಸೂಚನೆ ಕೊಟ್ಟಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪಾನಮತ್ತರನ್ನು ಮನವೊಲಿಸಿ ಮನೆಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದರು.
ಕೇರಳ ಮೂಲದ ಯುವಕನ ಬಳಿಯೂ ಮನೆಗೆ ಹೋಗುವಂತೆ ಕೇಳಿಕೊಂಡಿದ್ದರು. ಈ ವೇಳೆ ಸಿಟ್ಟಿಗೆದ್ದ ಯುವಕ ಇಂದಿರಾ ನಗರ ಪೊಲೀಸ್ ಇನ್ಸ್ ಪೆಕ್ಟರ್ ರವಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.ಆದರೆ ಪೆÇಲೀಸರು ಯುವಕನ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಆತ ಕುಡಿದ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಆತನನ್ನು ಮನೆಗೆ ಕಳುಹಿಸಿದ್ದಾರೆ ಅನ್ನೋ ಮಾಹಿತಿ ದೊರೆತಿದೆ.
ಯುವಕನಿಗೆ ಇರಿತ
ಹೊಸವರ್ಷಕ್ಕೆ ಶುಭಾಶಯ ಕೋರಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ದುರ್ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಮಲಾನಗರದ 5 ನೇ ಮುಖ್ಯರಸ್ತೆಯ ಚಾಕು ಇರಿತಕ್ಕೊಳಗಾಗಿ ಗಾಯಗೊಂಡ ಪ್ರವೀಣ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹೊಸವರ್ಷದ ಸಂಭ್ರಮದಲ್ಲಿ ಭಾನುವಾರ ರಾತ್ರಿ ಕುಡಿದು ದುಷ್ಕರ್ಮಿಗಳು ಮನೆಗೆ ಹೋಗುತ್ತಿದ್ದಾಗ ಅದೇ ದಾರಿಯಲ್ಲಿ ಹೋಗುತ್ತಿದ್ದ ಪ್ರವೀಣ್‍ಗೆ ಹೊಸವರ್ಷದ ಶುಭ ಕೋರಿದ್ದಾರೆ. ವಾಪಸ್ ವಿಶ್ ಮಾಡುವಂತೆ ಹೇಳಿದ್ದರು. ಆದರೆ ಪ್ರವೀಣ್ ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪುಂಡರು ಚಾಕುವಿನಿಂದ ಇರಿದಿದ್ದಾರೆ ಚಾಕು ಇರಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಸವೇಶ್ವರನಗರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಮೊಬೈಲ್ ಕಳವು
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಕಳ್ಳರು ಕೂಡ ತಮ್ಮ ಕೈಚಳ ತೋರಿಸಿದ್ದಾರೆ 50ಕ್ಕೂ ಹೆಚ್ಚು ಮೊಬೈಲ್ ಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಎಂಜಿ ರೋಡ್ ಹಾಗೂ ಬ್ರಿಗೇಡ್ ರೋಡ್ ನಲ್ಲಿ ಸಾವಿರಾರು ಮಂದಿ ಸೇರಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆಚರಣೆಯ ಮಧ್ಯೆ ಕೆಲ ಪುಂಡರು ತಮ್ಮ ಕೈಚಳಕ ತೋರಿದ್ದಾರೆ.ಸೋಮವಾರ ಬೆಳಗ್ಗೆ ಅಶೋಕನಗರ ಪೊಲೀಸ್ ಠಾಣೆಯ ಎದುರು ಮೊಬೈಲ್ ಕಳೆದುಕೊಂಡವರು ಸರತಿ ಸಾಲಿನಲ್ಲಿ ನಿಂತು ದೂರು ದಾಖಲಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








