ಹೂವಿನಹಡಗಲಿ

ಮಿನಿಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನಪ್ಪಿದ ಘಟನೆ ತಾಲೂಕಿನ ಹಿರೇಹಡಗಲಿ ಸಮೀಪ ಸಂಭವಿಸಿದೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದ ಸೇವಾಲಾಲ್ ಶಾಲೆಯ ಮೃತಪಟ್ಟ ವಿದ್ಯಾರ್ಥಿ ಕಿಶೋರ್ ಗೋವಿಂದನಾಯ್ಕ 4ನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳು ಬುಧವಾರ ರಾತ್ರಿ 1 ಗಂಟೆಗೆ ಶೈಕ್ಷಣಿಕ ಪ್ರವಾಸಕ್ಕಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಎದುರುಗಡೆ ಬಂದಂತಹ ಟಾಟಾಎಸ್ ವಾಹನವನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗಳು ಇದ್ದಂತಹ ವಾಹನ ಪಕ್ಕದ ತೆಗ್ಗಿನಲ್ಲಿ ಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತಪಟ್ಟು, ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಹಾಗೂ ಬೆಂಗಳೂರು ಆಸ್ಪತ್ರೆಗೆ ಕಳಿಸಿಕೊಡಲಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳಾದ ಮನೋಜಗೌಡ, ಅಮಾನ್, ವೀರೇಶ ಎನ್ನುವ ವಿದ್ಯಾರ್ಥಿಗಳು ಹೂವಿನಹಡಗಲಿ 100 ಹಾಸಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿರುವುದಾಗಿ ಪಿ.ಎಸ್.ಐ. ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
