ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸಾವು ..!!

ಬೆಂಗಳೂರು

         ತಿರುವು ತೆಗೆದುಕೊಳ್ಳುತ್ತಿದ್ದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಸ್ಕೂಟರ್‍ನಲ್ಲಿ ಹೋಗುತ್ತಿದ್ದ ಪಿಯುಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದುರ್ಘಟನೆ ಆರ್‍ಟಿ ನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಬಿಐ ಅಂಡರ್ ಪಾಸ್ ಬಳಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ದೇವರಜೀವನಹಳ್ಳಿಯ ಮಹಮದ್ ಷಾಹಿದ್ ಪಾಷ (19)ಎಂದು ಗುರುತಿಸಲಾಗಿದೆ.ಸಿಎಂಆರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಷಾಹಿದ್ ಪಾಷ ನಿನ್ನೆ ಸಂಜೆ 6.45ರ ವೇಳೆ ಹೊಂಡಾ ಆಕ್ಟೀವ ಸ್ಕೂಟರ್‍ನಲ್ಲಿ ಸಿಬಿಐ ಅಂಡರ್ ಪಾಸ್ ಬಳಿ ಹೋಗುತ್ತಿದ್ದರು.

         ಈ ವೇಳೆ ಚಂದ್ರ ಲೇಔಟ್‍ನಿಂದ ಕಾವಲ್ ಭೈರಸಂದ್ರದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ತಿರುವು ತೆಗೆದುಕೊಳ್ಳುವಾಗ ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಷಾಹಿದ್ ಪಾಷಾನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಆರ್‍ಟಿ ನಗರ ಸಂಚಾರ ಪೊಲೀಸರು, ಬಸ್ ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link