ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಿ ಬೆಳೆಯಬೇಕು : ಅಂಜನಪ್ಪ

ಹಿರಿಯೂರು :

         ಇಂದಿನ ಸ್ಪರ್ಧಾ ಪ್ರಪಂಚದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಂಸ್ಕಾರ ಹಾಗೂ ಮೌಲ್ಯಯುತ ಶಿಕ್ಷಣ ಪಡೆದು ಸಮಾಜದ ಆಸ್ತಿಯಾಗಿ ಬೆಳೆಯಬೇಕು ಎಂದು ಭಗೀರಥ ನೌಕರರ ಸಂಘದ ಅಧ್ಯಕ್ಷ ಅಂಜನಪ್ಪ ಹೇಳಿದರು.

           ವೇದಾವತಿ ನಗರದ ಉಪ್ಪಾರ ಸಮುದಾಯ ಭವನದಲ್ಲಿ ತಾಲೂಕು ಭಗೀರಥ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

           ವಿದ್ಯಾರ್ಥಿಗಳು ಪಾಸಾಗುವ ಅಂಕಗಳಿಸುವುದಕ್ಕೆ ಮಾತ್ರ ಸಿಮೀತವಾಗದೇ ಸತತವಾಗಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪೋಷಕರು ಮಕ್ಕಳಿಗೆ ಶಿಕ್ಷಣ ನೀಡುವಾಗ ಯಾವುದೇ ಒತ್ತಡ ಏರಬಾರದು. ಅವರ ಆಸಕ್ತಿಗೆ ತಕ್ಕಂತೆ ಶಿಕ್ಷಣ ಪಡೆಯಲು ಉತ್ತೇಜನ ನೀಡಬೇಕು. ವಿದ್ಯಾರ್ಥಿಗಳು ಶ್ರದ್ದೆಯಿಂದ ಶಿಕ್ಷಣ ಕಲಿಯುವ ಮೂಲಕ ಉತ್ತಮ ಸಂಯಮ, ಸಂಸ್ಕಾರ, ಸಂಸ್ಕ್ರತಿಯನ್ನು ಬೆಳೆಸಿಕೊಂಡರೆ ಉತ್ತಮ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದರು.

         ಸಂಘದ ಉಪಾಧ್ಯಕ್ಷ ಬಿ.ಎಂ.ಹನುಮಂತಪ್ಪ ಮಾತನಾಡಿ, ಮಕ್ಕಳು ಇಂದು ಕಂಪ್ಯೂಟರ್, ಮೊಬೈಲ್, ಸಿನಿಮಾ ಮುಂತಾದ ಕೆಲವು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಮುಂದಿನ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಅವಧಿಯಲ್ಲಿ ಅವುಗಳಿಂದ ದೂರ ಉಳಿದು, ಪೋಷಕರು ಹಾಗೂ ಗುರುಗಳು ನೀಡುವ ಮಾರ್ಗದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದರು.

            ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಹಾಗೂ ನಿವೃತ್ತ ನೌಕರರಿಗೆ ಸನ್ಮಾನಿಸಲಾಯಿತು.

          ಕಾರ್ಯಕ್ರಮದಲ್ಲಿ ತಾಲೂಕು ಉಪ್ಪಾರಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಭಗೀರಥ ಯುವಕಸಂಘದ ಅಧ್ಯಕ್ಷ ಕನಕದಾಸ್, ಮುಖಂಡರುಗಳಾದ ಶರಣಪ್ಪ, ಲಿಂಗರಾಜ್, ವೆಂಕಟೇಶ್, ಶೇಖರಪ್ಪ, ಶಿವಮೂರ್ತಿ, ಮಹಲಿಂಗಪ್ಪ, ಗುರುರಾಜ್, ಸಂಘದ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link