ಮಧುಗಿರಿ
ಪ್ರತಿಯೊಬ್ಬ ವಿದ್ಯಾರ್ಥಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕೆಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಆರ್.ಪಲ್ಲವಿ ತಿಳಿಸಿದರು.
ಪಟ್ಟಣದ ಗೌತಮ ಬುದ್ಧ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂಚಾರಿ ಕಾನೂನು ರಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಬಳಕೆಗೆ ಕಡಿವಾಣ ಹಾಕಿ, ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವಿದ್ಯಾರ್ಥಿಗಳು ಕಾನೂನಿನ ಬಗ್ಗೆ ತಿಳಿದುಕೊಳ್ಳುವ ಮೂಲಕ ಕಾನೂನನ್ನು ಪರಿಪಾಲನೆ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹುಲ್ಲೂರ ಹೇಮಲತಾ ಬನ್ನಪ್ಪ, ಎ.ಆರ್.ಎ ಮುಲ್ಲಾ, ತಹಸೀಲ್ದಾರ್ ತಿಪ್ಪೇಸ್ವಾಮಿ, ಬಿಇಓ ನರಸಿಂಹಯ್ಯ, ಸರಕಾರಿ ಅಭಿಯೋಜಕ ಮಹಮದ್ ಅಜ್ಮಲ್ ಪಾಷ, ಪಿಎಸ್ಐ ವೈ.ವಿ.ರವೀಂದ್ರ, ವಕೀಲರ ಸಂಘಧ ಅಧ್ಯಕ್ಷ ಜಯರಾಮ್, ಉಪಾಧ್ಯಕ್ಷ ವೀರಕ್ಯಾತಯ್ಯ, ಕಾರ್ಯದರ್ಶಿ ಮಂಜುನಾಥ್, ಪ್ರಾಂಶುಪಾಲ ಮಲ್ಲೇಶ್ ಕುಮಾರ್, ವಕೀಲರಾದ ಆನಂದ್, ಬಿ.ಆರ್.ರಾಮಕೃಷ್ಣಯ್ಯ. ಜಿ.ಎಂ.ದೀಪಮಹೇಶ್ ವಿದ್ಯಾರ್ಥಿಗಳು ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ







