ಹಂಪಿ ವಿಶ್ವವಿದ್ಯಾಲಯದ ವಿರುದ್ದ ವಿದ್ಯಾರ್ಥಿಗಳ ಪ್ರತಿಭಟನೆ..!

ಬಳ್ಳಾರಿ:

    ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳು ನೀಡುವ ಫೆಲೋಶಿಪ್ ನೀಡದೆ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಮೋಸ ಮಾಡುತ್ತಿದೆ ಎಂದು ವಿದ್ಯಾರ್ಥಿಗಳು ವಿ ವಿ  ವಿರುದ್ದ ಪ್ರತಿಭಟನೆ ನಡೆಸುತ್ತಿದ್ದಾರೆ.

   ಕಳೆದ ಎರಡು ವರ್ಷಗಳಿಂದ ಸುಮಾರು ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡದ ವಿಶ್ವ ವಿದ್ಯಾನಿಲಯ ವಿರುದ್ಧ ವಿವಿ ಗೇಟ್ ಮುಂಭಾಗದಲ್ಲಿ ಕುಳಿತು ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. 

     ಕಳೆದ ಎರಡು ತಿಂಗಳ ಹಿಂದೆ ವಿವಿಯ ಕ್ರಿಯಾ ಶಕ್ತಿ ಭವನದ ಮುಂದೆ ಮೂರು ದಿನಗಳ ಕಾಲ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ಎರಡನೇ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಹತ್ತು ಸಾವಿರ ಫೆಲೋಶಿಪ್ ಕೊಡಬೇಕಿದೆ ಆದರೆ, ಕಳೆದ ಎರಡು ವರ್ಷಗಳಿಂದ ಎರಡು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಿಲ್ಲ ಎಂದು  ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

    ಎಸ್.ಎಪ್.ಐ.ಮತ್ತು ಎ.ಐ.ಡಿ.ಎಸ್.ಒ.ಹಾಗೂ ಎ.ಐ.ಎಸ್.ಎಪ್.ಕೆ.ವಿ.ಎಸ್. ಮತ್ತಿತರ ವಿದ್ಯಾರ್ಥಿ ಸಂಘಟನೆಗಳ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ  

Recent Articles

spot_img

Related Stories

Share via
Copy link