ಖಾಸಗಿ ಬಸ್ ಡಿಕ್ಕಿ ಹೊಡೆದು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಸಾವು..!

ಬೆಂಗಳೂರು

     ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಹಾಜರಾಗಲು ಪೊಲೀಸ್ ಠಾಣೆಗೆ ತೆರಳುತ್ತಿದ್ದ ಸಹಾಯಕ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ರೊಬ್ಬರು ಮೃತಪಟ್ಟಿರುವ ದುರ್ಘಟನೆ ಚನ್ನಪಟ್ಟಣದ ಬಳಿ ನಡೆದಿದೆ.

     ಚನ್ನಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ ಆಗಿದ್ದ ಮಲ್ಲೇಶಯ್ಯ ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಕಳೆದ 3 ರಂದು ರಾತ್ರಿ ಕರ್ತವ್ಯಕ್ಕೆಂದು ಠಾಣೆಗೆ ತಮ್ಮ ಹೋಂಡಾ ಆಕ್ಟೀವಾದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಕಾಲು ಕಟ್ ಆಗಿ ಗಂಭೀರವಾಗಿ ಗಾಯಗೊಂಡು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಪಡೆಯುತ್ತಿದ್ದ ಎಎಸ್‌ಐ ಮಲ್ಲೇಶಯ್ಯ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಾವನ್ನಪ್ಪಿದ್ದಾರೆ.

    ಮೂಲತಃ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದ ರಾಯರದೊಡ್ಡಿ ನಿವಾಸಿಯಾಗಿರುವ ಮಲ್ಲೇಶಯ್ಯ ರಾಮನಗರದಲ್ಲಿಯೇ ವಾಸವಾಗಿದ್ದರು. ಸದ್ಯ ಅವರು ಮೂವರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಎಎಸ್‌ಐ ಮಲ್ಲೇಶಯ್ಯ ಸಾವಿನಿಂದಾಗಿ ಕುಟುಂಬದ ರೋಧನ ಮುಗಿಲು ಮುಟ್ಟುವಂತಿತ್ತು.ಘಟನೆ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ