ಬೆಂಗಳೂರು
ಅಪರಾಧ ಕೃತ್ಯಗಳನ್ನು ಹತ್ತಿಕ್ಕಿ ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ಸುಬ್ರಮಣ್ಯಪುರ ಉಪ ವಿಭಾಗದ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಗಳು ಹಳೆ ಆರೋಪಿಗಳ ಮನೆಗಳ ಮೇಲೆ ದಕ್ಷಿಣ ವಿಭಾಗದ ಪೊಲೀಸ್ ದಿಢೀರ್ ದಾಳಿ ನಡೆಸಿದ್ದಾರೆ.
ಡಿಸಿಪಿ ಅಣ್ಣಾಮಲೈ ನೇತೃತ್ವದ ಪೊಲೀಸರು ಶುಕ್ರವಾರ ಮುಂಜಾನೆ ಸುಬ್ರಮಣ್ಯಪುರ ಉಪ ವಿಭಾಗದ ಕೋಣನಕುಂಟೆ , ಕೆಎಸ್‍ಲೇಔಟ್ ,ತಲಘಟ್ಟಪುರ ಸೇರಿ ಐದು ಪೊಲೀಸ್ ಠಾಣೆಗಳ 24 ರೌಡಿಗಳು 36 ಮಂದಿ ಹಳೆ ಆರೋಪಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಅವರ ಚಟುವಟಿಕೆಗಳ ಮಾಹಿತಿ ಪಡೆದರು.
ಕೊಲೆ, ಕೊಲೆ ಯತ್ನ, ಕಳ್ಳತನ,ಸುಲಿಗೆ,ಬೆದರಿಕೆ, ಡಕಾಯಿತಿ ಸೇರಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದಿರುವ ರೌಡಿಗಳು,ಹಳೆ ಆರೋಪಿಗಳಿಗೆ ಅಪರಾಧ ಕೃತ್ಯದಲ್ಲಿ ತೊಡಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಯಿತು .ರೌಡಿಗಳ ಬಳಿ ದಾಖಲಾತಿಗಳು ಬೈಕ್‍ಗಳು ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ ಉತ್ತಮ ಜೀವನ ನಡೆಸುತ್ತಿದ್ದವರಿಗೆ ಮುಂದೆ ಅಪರಾಧ ಕೃತ್ಯಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








