ಬೆಂಗಳೂರು
ಸಕ್ಕರೆ ಮೇಲಿನ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆ.ಜಿ.ಗೆ ಎರಡು ರೂಪಾಯಿ ಹೆಚ್ಚಿಸಲಾಗಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ರಾಮವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.ಕಾರ್ಖಾನೆಗಳು ಕನಿಷ್ಠ ಮಾರಾಟ ಬೆಲೆಗಿಂತ ಕಡಿಮೆ ದರಕ್ಕೆ ಸಕ್ಕರೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಸಗಟು ಮಾರಾಟಗಾರರಿಗಾಗಲೀ ಅಥವಾ ಸಗಟು ಖರೀದಿದಾರರಿಗಾಗಲೇ ಮಾರುವಂತಿಲ್ಲ ಎಂದು ಅವರು ಹೇಳಿದರು.
ಕಬ್ಬು ಬೆಳಗಾರರ ಬಾಕಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಕ್ಕರೆಯ ಕನಿಷ್ಠ ಮಾರಾಟ ದರದಲ್ಲಿ ಏರಿಕೆ ಮಾಡಲಾಗಿದೆ ಎಂದು ಅವರು ತಿಳಿಸಿದರು.ಈ ಕ್ರಮದಿಂದಾಗಿ ಪ್ರತಿ ಕೆ.ಜಿ. ಸಕ್ಕರೆ ಮಾರಾಟದ ಕನಿಷ್ಠ ಬೆಲೆ 29 ರೂಪಾಯಿಯಿಂದ 31 ರೂಪಾಯಿಗೆ ಏರಿಕೆಯಾಗಿದ್ದು, ಕಬ್ಬು ಬೆಳಗಾರರಿಗೆ ಕಾರ್ಖಾನೆಗಳು ಸಕಾಲಕ್ಕೆ ಹಣ ಪಾವತಿಸಲು ಅನುಕೂಲವಾಗಲಿದೆ ಎಂದು ರಾಮ್ ವಿಲಾಸ್ ಪಾಸ್ವಾನ್ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
