ತುರುವೇಕೆರೆ:
ವಿದ್ಯಾರ್ಥಿಗಳು ಈ ಮಾಸಿಕ ಶಿಷ್ಯವೇತನವನ್ನು ಪಡೆದು ಉತ್ತಮ ಅಂಕಗಳನ್ನು ಪಡೆದು ತೇರ್ಗಡೆ ಹೊಂದಿ ಸಾಧನೆ ಮಾಡಬೇಕೆಂದು ಜಿಲ್ಲಾ ನಿರ್ದೇಶಕರಾದ ಪಿ.ರಾಧಾಕೃಷ್ಣರಾವ್ ವಿಧ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸುಜ್ಞಾನನಿಧಿ ಶಿಷ್ಯವೇತನಾ ಅರ್ಜಿ ವಿತರಣಾ ಕಾರ್ಯಕ್ರಮದಲ್ಲಿ ಪ್ರಸಕ್ತ ವರ್ಷದ ಸಾಲಿನಲ್ಲಿ ಮಂಜೂರಾದ ಸುಜ್ಞಾನಿಧಿ ಅರ್ಜಿಗಳನ್ನು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿತರಣೆ ಮಾಡಿ ಮಾತನಾಡಿದ ಅವರು ಯೋಜನೆಯ ರಜತೋತ್ಸವದ ನೆನಪಿನಾರ್ಥ ಪ್ರಾರಂಭಿಸಿದ ಈ ಕಾರ್ಯಕ್ರಮವು ಹಲವಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದೆ. ಇದುವರೆಗೂ ನಿರಂತರವಾಗಿ ನಡೆಯುತ್ತಾ ಬಂದಿದೆ.
ಯೋಜನಾಧಿಕಾರಿ ಧರ್ಣಪ್ಪಮೂಲ್ಯ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ತಿಳಿಸಿ, ಯೋಜನೆಯ ಪಾಲುದಾರ ಕುಂಟುಂಬಗಳ ಮಕ್ಕಳಿಗೆ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣಕ್ಕೆ ಅನುಕೂಲವಾಗುವಂತೆ ನಮ್ಮ ತಾಲ್ಲೂಕಿನ ವ್ಯಾಪ್ತಿಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಹೊಸದಾಗಿ 45 ವಿದ್ಯಾರ್ಥಿಗಳಿಗೆ ಮಾಸಿಕ ವೇತನ ನೀಡಲಾಗುತ್ತಿದೆಯಲ್ಲದೆ ಇದುವರೆಗೂ ಒಟ್ಟು 303 ವಿದ್ಯಾರ್ಥಿಗಳಿಗೆ ತಾಲ್ಲೂಕಿನಾದ್ಯಂತ ಶಿಷ್ಯ ವೇತನ ದೊರೆತಿರುವುದಾಗಿ ತಿಳಿಸಿದರು. ಈ ಸಂಧರ್ಭದಲ್ಲಿ ತಾಲ್ಲೂಕಿನ ಎಲ್ಲಾ ಮೇಲ್ವಿಚಾರಕರು, ಯೋಜನಾಧಿಕಾರಿಗಳು, ಕಾರ್ಯಕರ್ತರು ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
