ಬಳ್ಳಾರಿ
ಬಳ್ಳಾರಿ ಜಿಲ್ಲೆಯಲ್ಲಿ ಮಾರಕ ಎಚ್-1 ಎನ್ -1 ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಪ್ರಸಾದ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಅವರು ಈ ವಿಷಯ ತಿಳಿಸಿದರು.
ಜಿಲ್ಲೆಯಲ್ಲಿ ಜನವರಿ ಯಿಂದ ಅಕ್ಟೋಬರ್ 17 ವರೆಗೆ 9 ಶಂಕಿತ ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ 2 ಪ್ರಕರಣಗಳಲ್ಲಿ ರೋಗದ ಸೋಂಕು ಇರುವುದು ಕಂಡುಬಂದಿದ್ದು, 5 ಪ್ರಕರಣಗಳ ಬಗ್ಗೆ ಪ್ರಯೋಗಾಲಯದ ವರದಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ ಎಂದರು.
ರೋಗ ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಅದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ರೋಗ ಲಕ್ಷಣ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ