ಕಡಬ:
ಸುಳ್ಯದ ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಪ್ರಕರಣ ವರದಿಯಾಗಿದೆ.ಲಾಕ್ ಡೌನ್ ಹಿನ್ನಲೆಯಲ್ಲಿ ಕೈಗೊಳ್ಳಬೆಕಾದ ಕ್ರಮಗಳ ಕುರಿತು ಕಡಬದಲ್ಲಿ ಸಭೆ ನಡೆಸಿದ್ದ ಅಂಗಾರರು ಬಳಿಕ ಕಡಬ ಸಹಕಾರಿ ಸಂಘಕ್ಕೆ ಹೋಗಿ ಪಡಿತರ ವಿತರಣೆಗೆ ಸಂಬಂಧಿಸಿ ಮಾಹಿತಿ ಪಡೆಯುತ್ತಿದ್ದರು.ಈ ಸಂದರ್ಭದಲ್ಲಿ ಅಸ್ವಸ್ಥಗೊಂಡ ಅವರನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ದಾಗ ರಕ್ತದೊತ್ತಡ ಕಡಿಮೆಯಾಗಿದ್ದು ಕಂಡು ಬಂತು. ಕೂಡಲೇ ವೈದ್ಯರು ಅವರಿಗೆ ಅಗತ್ಯ ಚಿಕಿತ್ಸೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ