ವೀರ ಮಹಾದೇವಿ ಐತಿಹಾಸಿಕ ಚಿತ್ರದಲ್ಲಿ ಸನ್ನಿ ಲಿಯೋನ್ ನಟನೆ ಸಲ್ಲದು

ಬೆಂಗಳೂರು

       ಬಾಲಿವುಡ್‍ನ ಮಾದಕ ನಟಿ ಸನ್ನಿ ಲಿಯೋನ್ ವೀರ ಮಹಾದೇವಿ ಚಿತ್ರದಲ್ಲಿ ನಟಿಸುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

       ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ಅವರನ್ನು ಮಹಾದೇವಿ ಪಾತ್ರಕ್ಕೆ ಆಯ್ಕೆ ಮಾಡಿರುವ ನಿರ್ಮಾಪಕ ಡಿ.ಸಿ ವಾಡಿ ಉದಯನ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

        ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

        ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ರೆಡಿಯಾಗುತ್ತಿದೆ . ಹೊಸ ವರ್ಷ ಆಚರಣೆಗೆ ಸಿಲಿಕಾನ್ ಸಿಟಿಗೆ ಬಾಲಿವುಡ್ ಮೋಹಕ ನಟಿ ಸನ್ನಿಲಿಯೋನ್ ಅವರು ಬರುವುದನ್ನು ನಿಷೇಧಿಸಿದ್ದು, ಇತ್ತೀಚೆಗಷ್ಟೇ ಮತ್ತೆ ಅವರ ಎಂಟ್ರಿಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ನವೆಂಬರ್ 3 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ ಹೆಸರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ನಿ, ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಲಿದ್ದು, ಆದರೆ ಸನ್ನಿ ಕಾರ್ಯಕ್ರಮಕ್ಕೆ ಕನ್ನಡ ರಕ್ಷಣಾ ವೇದಿಕೆ ಯುವಸೇನೆ ವಿರೋಧ ವ್ಯಕ್ತಪಡಿಸಿತ್ತು.

      ವೀರ ಮಹಾದೇವಿ’ ಚಿತ್ರದಲ್ಲಿ ಸನ್ನಿಲಿಯೋನ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಇದು ಅಪರಾಧ ಯಾವುದೇ ಕಾರಣಕ್ಕೂ ಈ ಚಿತ್ರದಲ್ಲಿ ಸನ್ನಿ ನಟಿಸಬಾರದು. ನಟಿಸಲು ಮುಂದಾದರೆ ಚಿತ್ರದ ವಿರುದ್ಧ ಹೋರಾಟ ಮಾಡುತ್ತೇವೆ. ಸನ್ನಿ ಲಿಯೋನ್ ಎಲ್ಲಿಗೆ ಬಂದರೂ ನಾವು ಅವರನ್ನ ತಡೆಯುತ್ತೇವೆ ಇದು ನಮ್ಮ ಸಂಸ್ಕೃತಿ ವಿಚಾರ.ಆದರೆ ನಾವು ಕಾರ್ಯಕ್ರಮವನ್ನ ವಿರೋಧ ಮಾಡುತ್ತಿಲ್ಲ. ಬದಲಾಗಿ ಸನ್ನಿ ಲೀಯೊನ್ ಅವರನ್ನ ಮಾತ್ರ ವಿರೋಧಿಸುತ್ತೇವೆ ಎಂದು ಹಿಂದೆ ಕರವೇ ಯುವಸೇನೆಯ ಹರೀಶ್ ಹೇಳಿದ್ದರು.

      ಸನ್ನಿ ಲಿಯೋನ್ ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಬರಬಾರದು. ಅವರ ಹಿನ್ನೆಲೆ ನೋಡಿದರೆ ಬರುವುದು ಬೇಡ ಅನಿಸಲಿದೆ ಸನ್ನಿ ಲಿಯೋನ್ `ನೀಲಿ ಚಿತ್ರದ ತಾರೆ’. ಇದರಿಂದ ನಮ್ಮ ಸಂಸ್ಕೃತಿಗೆ ಧಕ್ಕೆ ಉಂಟಾಗುತ್ತದೆ. ನಮ್ಮದು ಸಂಸ್ಕೃತಿಯ ನಾಡು. ಇದರಿಂದ ನಮ್ಮ ಹಿಂದೂ ಸಂಸ್ಕೃತಿಗೆ ಹಾಳಾಗಲಿದೆ ಎಂದು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap