ಬೆಂಗಳೂರು:
ಪ್ರತಿ ವರ್ಷದಂತೆ ಈ ವರ್ಷವೂ ಸಾರಿಗೆ ನಿಗಮವು ಪ್ರಯಾಣಿಕರ ಅನುಕೂಲಕ್ಕೆಂದು ಡಿ.21 ಮತ್ತು 22 ರಂದು ಬೆಂಗಳೂರು ನಗರದಿಂದ ರಾಜ್ಯ ಮತ್ತು ಹೊರರಾಜ್ಯಗಳ ವಿವಿಧೆಡೆಗೆ ಸುಮಾರು 550 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಿದ್ದು ಪ್ರಯಾಣಿಕರು ಇದರ ಅನುಕೂಲ ಪಡೆದುಕೊಳ್ಳಲು ಸಂಸ್ಥೆ ಕೋರಿದೆ.
ಈ ವಿಶೇಷ ಬಸ್ಸುಗಳು ಕೆಂಪೇಗೌಡ ಕೇಂದ್ರ ಬಸ್ ನಿಲ್ದಾಣದಿಂದ ಹೋರಟು ರಾಜ್ಯದ ಪ್ರಮುಖ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ. ಬೀದರ್, ತಿರುಪತಿ ಮೊದಲಾದ ಸ್ಥಳಗಳಿಗೆ ಹೋಗುತ್ತವೆ.
ಇನ್ನೊಂದು ಪ್ರಮುಖ ಬಸ್ ನಿಲ್ದಾಣವಾದ ಸ್ಯಾಟ್’ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾ ಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೆಚ್ಚುವರಿ ಬಸ್ ಗಳು ಹೊರಡಲಿವೆ ಎಂದು ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.