ಜಿಲ್ಲಾಸ್ಪತ್ರೆಗೆ ಡಿಸಿ ದಿಢೀರ್ ಭೇಟಿ, ಪರಿಶೀಲನೆ

0
13

ದಾವಣಗೆರೆ:

      ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಿನ್ನೆ (ಭಾನುವಾರ) ತಾನೇ ಅಧಿಕಾರ ವಹಿಸಿಕೊಂಡಿರುವ ಡಾ.ಬಗಾದಿ ಗೌತಮ್ ಸೋಮವಾರ ಸಂಜೆ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

       ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ನೂತನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆಸ್ಪತ್ರೆ ಎಲ್ಲಾ ವಾರ್ಡ್‍ಗಳಿಗೂ ಭೇಟಿ ನೀಡಿ, ಸ್ವಚ್ಛತೆ, ಮೂಲಭೂತ ಸೌಲಭ್ಯವನ್ನು ಪರಿಶೀಲಿಸಿ, ರೋಗಿಗಳಿಗೆ ಆಸ್ಪತ್ರೆಯಿಂದ ನೀಡುವ ಆಹಾರವನ್ನು ಸ್ವತಃ ಜಿಲ್ಲಾಧಿಕಾರಿಗಳೇ ಪರಿಶೀಲನೆ ನಡೆಸಿದರು.

       ಭೇಟಿಯ ವೇಳೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳ ಯೋಗಕ್ಷೇಮ ವಿಚಾರಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯ ಊಟ ಹೇಗಿದೆ?, ಸರಿಯಾಗಿ ಊಟ ಕೊಡ್ತಾರಾ? ಸರಿಯಾದ ಸಮಯಕ್ಕೆ ವೈದ್ಯರು ಬಂದು ಚಿಕಿತ್ಸೆ ನೀಡುತ್ತಿತ್ತಾರಾ? ಎಂದು ರೋಗಿಗಳನ್ನು ವಿಚಾರಿಸಿದರು.

         ಇದೇ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿರುವ ಕೊರತೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಆಸ್ಪತ್ರೆಗೆ ಸಿಟಿ ಸ್ಕ್ಯಾನಿಂಗ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತ್ರಿಪುಲಾಂಭ, ಆಸ್ಪತ್ರೆಯ ಆರ್‍ಎಂಒ ಡಾ.ಹೆಚ್.ಡಿ.ವಿಶ್ವನಾಥ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

LEAVE A REPLY

Please enter your comment!
Please enter your name here