ನಗರದಲ್ಲಿ ವಾಲ್ಮೀಕಿ ನಾಯಕ ಸ್ವಾಭಿಮಾನಿ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು

         ಪರಿಶಿಷ್ಠ ಪಂಗಡಗಳ ಜನಸಂಖ್ಯೆ ಗನುಗುಣವಾಗಿ ಮೀಸಲಾತಿಯ ಪ್ರಮಾಣವನ್ನು ಶೇ. 7.5ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ ನಾಯಕ ಸ್ವಾಭಿಮಾನಿ ಚಳವಳಿಯ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

        ಪುರಭವನದ ಮುಂಭಾಗ ಸೇರಿದ ಚಳವಳಿಯ ನೂರಾರು ಕಾರ್ಯಕರ್ತರು ಸಿ, ಭೂರಹಿತ ಪರಿಶಿಷ್ಠ ಪಂಗಡಗಳ ಕೃಷಿ ಕಾರ್ಮಿಕರಿಗೆ ತಲಾ 2 ಎಕರೆ ಜಮೀನು ನೀಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

        ಪರಿಶಿಷ್ಠ ಪಂಗಡದ ಅಡಿಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಧಮನಿತರನ್ನು ವಂಚಿಸಿರುವವರ ವಿರುದ್ಧ ವಿಶೇಷ ತಂಡ ರಚಿಸಿ, ಕಾಲಮಿತಿಯೊಳಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

         ಪರಿಶಿಷ್ಠ ಪಂಗಡಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಗೆ ಹಾಗೂ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ನಿಗಮಕ್ಕೆ ಒಂದೂವರೆ ಸಾವಿರ ಕೋಟಿ ಅನುದಾನ ನೀಡಬೇಕೆಂದು ಒತ್ತಾಯಿಸಿದರು.ಪ್ರತಿಭಟನೆ ನೇತೃತ್ವವನ್ನು ಸ್ವಾಭಿಮಾನಿ ಚಳವಳಿ ರಾಜ್ಯಾಧ್ಯಕ್ಷ ರಾಜಣ್ಣ ವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link