ಚಳ್ಳಕೆರೆ
ರಾಜ್ಯ ಸರ್ಕಾರ ಪ್ರತಿ ಶನಿವಾರದನ್ನು ಸ್ವಚ್ಚತಾ ಶನಿವಾರವನ್ನಾಗಿ ಆಚರಿಸುವಂತೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸ್ವಚ್ಚತಾ ಶನಿವಾರ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಿ.ಎಲ್.ಈಶ್ವರಪ್ರಸಾದ್ ಚಾಲನೆ ನೀಡಿದರು.
ಅವರು, ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಒಳ ಆವರಣದಲ್ಲಿ ಸಿಬ್ಬಂದಿಯ ಸಹಕಾರದೊಂದಿಗೆ ಸಹಕಾರ ನೀಡಿದರು. ತಾಲ್ಲೂಕು ಪಂಚಾಯಿತಿ ಕಾರ್ಯಾಲಯವೂ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಿಬ್ಬಂದಿಯವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮನವಿ ಮಾಡಲಾಗಿದೆ ಎಂದರು.