ಸ್ವಚ್ಛತೆ ಕಾಪಾಡುವುದರ ಜತೆಗೆ ಪರಿಸರ ಕಾಳಜಿ ವಹಿಸಿ

ಬಳ್ಳಾರಿ

  ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಜೊತೆಗೆ ಸಸಿಗಳನ್ನು ನೆಟ್ಟು ಪರಿಸರವನ್ನು ಉಳಿಸಬೇಕು ಮತ್ತು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶಿವರಾಜ ಹೆಡೆ ಅವರು ಹೇಳಿದರು.

   ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಮಂಗಳವಾರರಂದು ಸ್ವಚ್ಛಮೇವ ಜಯತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ.ಗುರುನಾಥ ಬಿ.ಚವ್ಹಾಣ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಕಾಯಕಲ್ಪ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ಆರ್. ವಿಜಯಲಕ್ಷ್ಮಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರಾಜಶೇಖರ ರೆಡ್ಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ನವೀನಕುಮಾರ್, ಡಾ.ಭಾಸ್ಕರ್, ಡಾ.ಲಕ್ಷ್ಮಿಕಾಂತ್, ಡಿ.ಕ್ಯೂ.ಸಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link