ಹಿರಿಯೂರು: 

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತ್ಯಭಾಮ ಅವರ ಸೂಚನೆ ಮೇರೆಗೆ ಜಿಲ್ಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮಗಳಿಗೆ ಶನಿವಾರ ಚಾಲನೆ ನೀಡಲಾಗಿದೆ.ಹಿರಿಯೂರು ತಾಲ್ಲೂಕಿನ ಹರ್ತಿಕೋಟೆ ಗ್ರಾಮ ಪಂಚಾಯತಿ ವತಿಯಿಂದ ಶನಿವಾರ ಸರಕಾರಿ ಶಾಲೆಯ ಆವರಣದಲ್ಲಿ ಮಕ್ಕಳಿಂದ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಅರ್ಥಪೂರ್ಣವಾಗಿ ಸ್ವಚ್ಛತಾ ಕಾರ್ಯ ಮಾಡಿದರು. ಸ್ಚಚ್ಛತೆ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಲಾಯಿತು.
ಇದೇ ರೀತಿ ಪ್ರತಿ ಶನಿವಾರ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತದೆ. ಗ್ರಾಮಸ್ಥರು, ಯುವಕರು ಮಹಿಳೆಯರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕೆಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬೇಗಂ ಅವರು ಮನವಿ ಮಾಡಿದರು.ಶಾಲೆಯ ಮುಖ್ಯ ಶಿಕ್ಷಕ ಗಂಗಾಧರಪ್ಪ, ಪಿಡಿಒ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಹೆಚ್.ಟಿ ಮಹಂತೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
