ಕುಣಿಗಲ್
ಸರ್ಕಾರ ನಿಗದಿಪಡಿಸಿರುವ ಶಾಲಾ ಶುಲ್ಕದ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಅಳವಡಿಸದೆ ಪೋಷಕರಿಗೆ ಮೋಸ ಮಾಡುತ್ತಿದ್ದಾರೆ ಹಾಗೂ ಸರ್ಕಾರ ನಿಗದಿಪಡಿಸಿರುವ ತರಗತಿಗಳಿಗೆ ಬದಲಾಗಿ ಹೆಚ್ಚುವರಿ ವಿಭಾಗಗಳನ್ನು ಪ್ರಾರಂಭಿಸಲು ಇಲಾಖೆಯಿಂದ ಮಾನ್ಯತೆಯನ್ನು ಪಡೆದುಕೊಂಡಿದ್ದಾರಾ, ಕೂಡಲೇ ಶಾಲೆಗಳನ್ನು ತಪಾಸಣೆ ಮಾಡಿ ಇಂತಹ ಶಾಲೆಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಬಿಇಒ ತಿಮ್ಮರಾಜು ಅವರಿಗೆ ತಾ.ಪಂ.ಅಧ್ಯಕ್ಷ ಹರೀಶ್ ನಾಯಕ್ ಸೂಚನೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧ್ಯಕ್ಷ ಹರೀಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೆಲವು ಶಿಕ್ಷಕರು ಸರಿಯಾದ ವೇಳೆಗೆ ಕರ್ತವ್ಯಕ್ಕೆ ಶಾಲೆಗೆ ಹಾಜರಾಗದೆ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿ ಮುಂದೆತಿ ರುಗಾಡುತ್ತ ರಾಜಕಾರಣ ಮಾಡುತ್ತಿದ್ದಾರೆ ಎಂದು ಕ್ಷೇತ್ರಶಿಕ್ಷಣಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಸುಮಾರು ಬಾರಿ ಬಿಇಒ ಕಚೇರಿ ಬಳಿಯಲ್ಲಿ ಹದಿನೈದರಿಂದ ಇಪ್ಪತ್ತು ಮಂದಿ ಶಿಕ್ಷಕರು ಶಾಲೆಗೆ ಹೋಗದೆ ಕಾಲ ಕಳೆಯುವವರನ್ನು ನಾನು ವೀಕ್ಷಣೆ ಮಾಡಿದ್ದೇನೆ. ಇವರುಗಳಿಗೆ ನೀವು ಶಾಲೆಗೆ ಹೋಗದಿದ್ದರೂ ಸಂಬಳ ನೀಡುತ್ತೀರಾ ಎಂದು ಪ್ರಶ್ನಿಸಿದರು. ಶಿಕ್ಷಣಾಧಿಕಾರಿಗಳ ಕರ್ತವ್ಯದಂತೆ ಬಿಆರ್‍ಸಿ ಅವರಿಗೂ ಅಧಿಕಾರವಿದೆ. ಶಾಲೆಗೆ ಸುಖಾಸುಮ್ಮನೆ ಚಕ್ಕರ್ ಒಡೆಯುವ ಶಿಕ್ಷಕರನ್ನು ಗುರುತಿಸಿ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವರಾಜಯ್ಯ ಮಾತನಾಡಿ ನಾನು ಗ್ರಾಮೀಣ ಪ್ರದೇಶದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಧ್ಯಾಹ್ನದ ವೇಳೆ ವೈದ್ಯರು ಒಳಗೊಂಡಂತೆ ಕೆಲವು ಸಿಬ್ಬಂದಿಗಳು ಕಾಣಿಸುತ್ತಿಲ್ಲ. ಹೀಗಾದರೆ ಗ್ರಾಮೀಣ ಪ್ರದೇಶದ ರೋಗಿಗಳ ಗತಿ ಏನು? ಎಂದು ಟಿಎಚ್‍ಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ವ್ಯವಸ್ಥೆಯನ್ನು ಸರಿಪಡಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಹೇಮಾವತಿ, ಅರಣ್ಯ ,ತೋಟಗಾರಿಕೆ, ಕೆಇಬಿ, ಅಬಕಾರಿ, ಒಳಗೊಂಡಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಲವಾರು ಚರ್ಚೆಗಳು ಜರುಗಿದವು. ಸಭೆಯಲ್ಲಿ ತಾಪಂ ಇಒ ಶಿವರಾಜಯ್ಯ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.