ತಂಬಾಕು ಮಾರಾಟ-ವಿವಿಧ ಅಂಗಡಿಗಳ ಮೇಲೆ ದಾಳಿ

ಹಾವೇರಿ

      ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಸೋಮವಾರ ಹಾವೇರಿ ನಗರದ ಆಯ್ದ 11 ಅಂಗಡಿಗಳ ಮೇಲೆ ದಾಳಿ ನಡೆಸಿ ರೂ.1600 ದಂಡ ವಸೂಲಿ ಮಾಡಿದೆ.

       ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿ 1600 ರೂ. ದಂಡ ವಸೂಲಿ ಮಾಡಲಾಗಿದೆ.

     ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ಮಹೇಶ ಕುಮ್ಮೂರ ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link