ಹುಳಿಯಾರು :ಲಾಕ್‍ಡೌನ್ ಪ್ರದೇಶಕ್ಕೆ ತಹಸೀಲ್ದಾರ್ ಭೇಟಿ

ಹುಳಿಯಾರು

      ಹುಳಿಯಾರು ಪಟ್ಟಣದ ನಿವಾಸಿಯೊಬ್ಬರಿಗೆ ಹಾಗೂ ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಸಿ.ಪಾಳ್ಯದ ನಿವಾಸಿಯೊಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಹುಳಿಯಾರಿನ ತಿಪಟೂರು ರಸ್ತೆಯ ಒಣಕಾಲುವೆ ಬಳಿಯ ನಿವಾಸಿ ಕ್ಷೌರಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇವರನ್ನು ಚಿಕ್ಕನಾಯಕನಹಳ್ಳಿ ಸಮೀಪದ ಮೇಲನಹಳ್ಳಿಯ ಕೋವಿಡ್ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಅಲ್ಲದೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರನ್ನು ಹುಳಿಯಾರು ಹಾಸ್ಟ್ಟೆಲ್‍ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.

      ಕೆಂಕೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆ.ಸಿ.ಪಾಳ್ಯದಲ್ಲಿ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿಯೋರ್ವನಿಗೆ ದೃಢಪಟ್ಟಿದೆ. ಇವರನ್ನೂ ಸಹ ಮೇಲನಹಳ್ಳಿಗೆ ಕಳುಹಿಸಿಕೊಡಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಮಂದಿಯನ್ನು ಚಿಕ್ಕನಾಯಕನಹಳ್ಳಿ ಹಾಸ್ಟ್ಟೆಲ್‍ಗೆ ಕಳುಹಿಸಿಕೊಡಲಾಗಿದೆ.

      ಗ್ರಾಮದಲ್ಲಿ ಕೊರೊನಾ ಪ್ರಕರಣ ದೃಢವಾದ ಹಿನ್ನೆಲೆಯಲ್ಲಿ ಇದೇ ಗ್ರಾಮದ ಇಬ್ಬರು ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ಕೋವಿಡ್ ಪರೀಕ್ಷೆಗೆ ಒಳಗಾದರು. ಇವರಿಬ್ಬರೂ ಬೇರೆಬೇರೆ ಕುಟುಂಬದವರಾಗಿದ್ದು ಇಬ್ಬರಿಗೂ ವಾರದಿಂದ ಜ್ವರವಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗಿರಲಿಲ್ಲ.ಇನ್ನು ಕೊರೊನಾ ಪಾಸಿಟಿವ್ ದೃಢಪಟ್ಟಿರುವ ವ್ಯಕ್ತಿಗಳು ವಾಸವಾಗಿದ್ದ ಏರಿಯಾವನ್ನು ಅಗ್ನಿ ಶಾಮಕ ದಳದ ಸಹಾಯದಿಂದ ಸ್ಯಾನಿಟೈಸೇಶನ್ ಮಾಡಲಾಗಿದ್ದು, ಲಾಕ್‍ಡೌನ್ ಸಹ ಮಾಡಲಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ತೇಜಸ್ವಿನಿ ಭೇಟಿ ನೀಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link