ಹಾವೇರಿ
ಕಾರ್ಖಾನೆ ಹಾಗೂ ಇತರೆಡೆ ರಾಸಾಯನಿಕ ಸೋರಿಕೆಯಿಂದ ಉಂಟಾಗುವ ವಿಪತ್ತುಗಳ ತುರ್ತು ನಿರ್ವಹಣೆಗೆ ಸುರಕ್ಷತಾ ಕ್ರಮ ಹಾಗೂ ಅವಘಡಗಳ ಕುರಿತಂತೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಬಾಯ್ಲರ್ ಮತ್ತು ಕಾರ್ಖಾನೆಗಳ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಪತ್ತು ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಸಾಯನಿಕ ಅವಘಡಗಳನ್ನು ತಡೆಯಲು ಸಂದರ್ಭದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಘಟನೆ ಸಂಭವಿಸಿದಾಗ ತುರ್ತು ನಿರ್ವಹಣಾ ಯೋಜನೆ ಹಾಗೂ ಪರಿಹಾರ ಕಾರ್ಯಗಳ ಕುರಿತಂತೆ ಯೋಜಿತ ಕಾರ್ಯಕ್ರಮಗಳನ್ನು ರೂಪಿಸುವಂತೆ ಸಲಹೆ ನೀಡಿದರು.
ಜಿಲ್ಲೆಯ ರಾಣೇಬೆನ್ನೂರ ತಾಲೂಕಿನ ಗ್ರಾಸಿಂ ಕಂಪನಿಯಲ್ಲಿ ಮಾತ್ರ ರಾಸಾಯನಿಕ ಬಳಕೆ ಮಾಡಲಾಗುತ್ತಿದ್ದು, ಕಾಲಕಾಲಕ್ಕೆ ಈ ಕಂಪನಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು ಪರಿಶೀಲಿಸಲಾಗುತ್ತಿದೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಹಾಗೂ ಜಾಗೃತಿಗಾಗಿ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಅಣುಕು ಪ್ರದರ್ಶನ ಮೂಲಕ ಕಾರ್ಖಾನೆಯ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಕಂಪನಿಯ ಪ್ರತಿನಿಧಿಗಳು ಸಭೆಯಲ್ಲಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕಾರ್ಖಾನೆ ಪ್ರದೇಶ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ರಾಸಾಯನಿಕ ಅವಘಡಗಳ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಸೇರಿದಂತೆ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಸಹಾಯಕ ನಿರ್ದೇಶಕರಾದ ಚೈತನ್ಯ, ಗ್ರಾಸೀಂ ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀನಿವಾಸ ಹಾಗೂ ತಾಂತ್ರಿಕ ತಂಡ, ಪೌರಾಯುಕ್ತ ಬಸವರಾಜ ಜಿದ್ದಿ, ಅಗ್ನಿಶಾಮಕ ಅಧಿಕಾರಿ ಸೋಮಶೇಖರ ಅಗಡಿ, ವಾರ್ತಾಧಿಕಾರಿ ಬಿ.ಆರ್.ರಂಗನಾಥ್, ಪರಿಸರ ಇಲಾಖಾ ಅಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿಪ್ರಜಾಪ್ರಗತಿ facebook page ಲೈಕ್ ಮಾಡಿ