ಸ್ಮಾರ್ಟ್ ಸಿಟಿ ಲೋಪ ಸರಿಪಡಿಸದಿದ್ದರೆ ಕಾನೂನು ಕ್ರಮ ಜರುಗಿಸಿ : ಜಿ ಎಸ್ ಬಿ

ತುಮಕೂರು:

     ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಆಗಿರುವ ಲೋಪಗಳನ್ನು ಸರಿಪಡಿಸದಿದ್ದರೆ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲು ಸಂಸದ ಜಿ.ಎಸ್.ಬಸವರಾಜ್ ಸೂಚಿಸಿದರು.

     “ಪಿಎಂಸಿ ಮಾಡಿದ್ದೇ ಯೋಜನೆ, ನಡೆದಿದ್ದೇ ಕಾಮಗಾರಿ, ಸ್ಮಾರ್ಟ್ ಸಿಟಿಯೋ ಮಡ್ ಸಿಟಿಯೋ? ಪಾಲಿಕೆ ಆಟಕ್ಕುಂಟು ಲೆಕ್ಕಕ್ಕಿಲ್ಲ!’’ ಎಂಬ ಶೀರ್ಷಿಕೆಯಡಿ ಆ.25ರಂದು ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಸಂಸದ ಜಿ.ಎಸ್.ಬಸವರಾಜ್ ಅವರು, ಮಂಗಳವಾರ ಪಾಲಿಕೆ ಸಾಮಾನ್ಯ ಸಭೆಗೂ ಮುನ್ನಾ ಮೇಯರ್ ಮತ್ತು ಆಯುಕ್ತರೊಂದಿಗೆ ಸಭೆ ನಡೆಸಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಲೋಪಗಳ ಬಗ್ಗೆ ತನಿಖೆ ನಡೆಸಿ ಲೋಪದೋಷಗಳನ್ನು ಅವರು ಸರಿಪಡಿಸಿಕೊಳ್ಳದಿದ್ದರೆ ಕಾನೂನು ಕ್ರಮ ಜರುಗಿಸಲು ಸರಕಾರದ ಗಮನಕ್ಕೆ ತನ್ನಿ. ಕಳಪೆ ಗುಣಮಟ್ಟದ ಕಾಮಗಾರಿಗಳ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಎಂದು ನಿರ್ದೇಶಿಸಿದರು.

    ಯುಜಿಡಿ ಸಮಸ್ಯೆಗೂ ಅಧಿಕಾರಿಗಳ ಇದರೊಂದಿಗೆ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯಿಂದ ಕೈಗೊಂಡಿರುವ ನಗರದಲ್ಲಿ ಯುಜಿಡಿ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಅಲ್ಲಲ್ಲಿ ಪೈಪ್‍ಲೈನ್, ಮ್ಯಾನ್‍ಹೋಲ್ ಹೊಡೆದು ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳ ಮೇಲೂ ಕ್ರಮ ಜರುಗಿಸುವಂತೆ ಸೂಚಿಸಿದರು.ಈ ವೇಳೆ ಪಾಲಿಕೆ ಮೇಯರ್ ಫರೀದಾ ಬೇಗಂ, ಉಪಮೇಯರ್ ಶಶಿಕಲಾ, ಆಯುಕ್ತರಾದ ರೇಣುಕಾ, ವಿಪಕ್ಷ ನಾಯಕ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಮಲ್ಲಿಕಾರ್ಜುನ್‍ಯ್ಯ ಅಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ