ಕೊರೊನಾ ವೈರಸ್ ಸೋಂಕು : ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಚಿವರ ಸೂಚನೆ

ಬೆಂಗಳೂರು

    ಕೊರೊನಾ ವೈರಸ್ ಸೊಂಕು ಹಿನ್ನಲೆಯಲ್ಲಿ ಎಲ್ಲೆಂದರಲ್ಲಿ ಆಹಾರ ತಿನಿಸುಗಳನ್ನು ಮಾರಾಟ ಮಾಡದಂತೆ ಕಟ್ಟೆಚ್ಚರ ವಹಿಸುವಂತೆ ಆಹಾರ ಸಚಿವ ಕೆ. ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

     ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಆಹಾರ ಸಚಿವರು ರಸ್ತೆ ಬದಿ ತಿನಿಸುಗಳನ್ನು ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಹಾಗಾಗಿ, ರಸ್ತೆ ಬದಿಯಲ್ಲಿ ಆಹಾರ ತಿನಿಸುಗಳ ಮಾರಾಟಕ್ಕೆ ಅವಕಾಶ ನೀಡಬೇಡಿ ಎಂದು ಸೂಚನೆ ನೀಡಿದರು.

    ಪುಟ್ಪಾತ್‌ಗಳಲ್ಲಿ ಕೆಲವರು ಅನಧಿಕೃತವಾಗಿ ಆಟೋ, ಕಾರುಗಳಲ್ಲಿ ಆಹಾರಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಇದಕ್ಕೂ ಅವಕಾಶ ನೀಡಬೇಡಿ ಎಂದು ಸೂಚನೆ ನೀಡಿದರು.ಪ್ರತಿಯೊಂದು ವಾರ್ಡ್‌ಗಳಲ್ಲೂ ಕಸ ವಿಲೇವಾರಿ ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳಿ, ಸ್ವಚ್ಛತೆಗೂ ಗಮನ ನೀಡಿ ಎಂದು ಅವರು ಸಭೆಯಲ್ಲಿ ಪಾಲ್ಗೊಂಡಿದ್ದ ಬಿಬಿಎಂಪಿ ಅಧಿಕಾರಿಗಳಿಗೂ ಸೂಚನೆ ನೀಡಿದರು.

     ನಗರದಲ್ಲಿ ಕಾಲರಾ ಸೇರಿದಂತೆ ಸಾಂಕ್ರಾಮಿಕ ರೋಗಗಳು ಹರಡುತ್ತಿರುವ ಬಗ್ಗೆ ವರದಿಗಳು ಬಂದಿವೆ. ಹಾಗಾಗಿ, ಕಾಲರಾ ತಡೆಗೂ ಅಗತ್ಯಕ್ರಮ ಕೈಗೊಳ್ಳಿ ಎಂದರು.ರಾಜ್ಯಸರ್ಕಾರದ ಆದೇಶದಂತೆ ಕೊರೊನಾ ವೈರಸ್ ಸೋಂಕು ತಡೆಗೆ ಯಾವುದೇ ಸಭೆ-ಸಮಾರಂಭಗಳಿಗೂ ಅವಕಾಶ ನೀಡುವುದು ಬೇಡ, ಅಗತ್ಯವಿದ್ದರೆ ಪೊಲೀಸರ ನೆರವನ್ನು ಪಡೆದುಕೊಳ್ಳಿ ಎಂದು ಸೂಚನೆ ನೀಡಿದರು.

     ಪ್ರತಿ ವಾರ್ಡ್‌ಗಳ ಎಲ್ಲ ರಸ್ತೆಗಳಲ್ಲೂ ಔಷಧಿ ಸಿಂಪಡಣೆ ಮಾಡಿ ಸೋಂಕು ಹರಡದಂತೆ ಜಾಗೃತಿ ವಹಿಸಬೇಕು. ಪ್ರತಿನಿತ್ಯ ಔಷಧಿ ಸಿಂಪಡಿಸಿದ ಕುರಿತು ಮಾಹಿತಿ ಒದಗಿಸುವಂತೆಯೂ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ. ರಸ್ತೆ ಬದಿ ವ್ಯಾಪಾರಿಗಳನ್ನು ಸಂಪೂರ್ಣವಾಗಿ ಮುಚ್ಚಬೇಕು, ಅಗತ್ಯ ಬಿದ್ದರೆ ಪೊಲೀಸರ ನೆರವನ್ನು ಪಡೆಯುವಂತೆಯೂ ಅವರು ನಿರ್ದೇಶನ ನೀಡಿದ್ದಾರೆ.ಸಭೆ-ಸಮಾರಂಭಗಳನ್ನು ನಿಲ್ಲಿಸುವಂತೆಯೂ ಸಲಹೆ ಮಾಡಿರುವ ಅವರು, ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.

     ಕೊರೊನಾ ಸೋಂಕು ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಇದನ್ನು ಎಲ್ಲರೂ ಪಾಲಿಸುವಂತೆ ಸಲಹೆ ನೀಡಿದರು.ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಮಾದಕವಸ್ತು ಮಾರಾಟದಂತಹ ಜಾಲಗಳಿಂದಾಗಿ ಯುವ ಜನರ ಮೇಲೆ ಪ್ರಭಾವ ಬೀರುತ್ತಿದ್ದು, ಪೊಲೀಸರು ಎಚ್ಚರಿಕೆ ವಹಿಸಬೇಕು ಬೇಸಿಗೆ ಕಾಲ ಆರಂಭವಾಗಿರುವುದರಿಂದ ನೀರಿನ ಅಭಾವ ತಡೆಯಲು ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap