ಫೆ.8ರಂದು ತಾಲೂಕು ಸಾಹಿತ್ಯ ಸಮ್ಮೇಳನ…!!

ದಾವಣಗೆರೆ:

       ತಾಲೂಕಿನ ಆನಗೋಡು ಗ್ರಾಮದಲ್ಲಿ ಫೆ.8ರಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 8ನೇ ದಾವಣಗೆರೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

       ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಸಾಹಿತಿ ಆರ್.ಜಿ.ಹಳ್ಳಿ ನಾಗರಾಜ್‍ರವರ ಸರ್ವಾಧ್ಯಕ್ಷತೆಯಲ್ಲಿ ಆನಗೋಡು ಗ್ರಾಮದ ವಿಶ್ವಬಂಧು ಶ್ರೀಮರುಳಸಿದ್ಧೇಶ್ವರ ದೇವಸ್ಥಾನ ಆವರಣದಲ್ಲಿ ಸಮ್ಮೇಳನ ನಡೆಯಲಿದೆ ಎಂದರು.

       ಅಂದು ಬೆಳಗ್ಗೆ 8 ಗಂಟೆಗೆ ರಾಷ್ಟ್ರಧ್ವಜವನ್ನು ಆನಗೋಡು ಜಿಪಂ ಸದಸ್ಯ ಕೆ.ಎಸ್.ಬಸವಂತಪ್ಪ, ನಾಡಧ್ವಜವನ್ನು ಆನಗೋಡು ಗ್ರಾಪಂ ಅಧ್ಯಕ್ಷ ಕೆ.ರವಿ, ಪರಿಷತ್ ಧ್ವಜವನ್ನು ತಾವು ಆರೋಹಣ ಮಾಡಲಿದ್ದೇವೆ. ನಂತರ 8.30ಕ್ಕೆ ನಡೆಯುವ ನಾಡದೇವಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆಗೆ ಜಿಲ್ಲಾ  ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್ ಚಾಲನೆ ನೀಡಲಿದ್ದಾರೆಂದು ಹೇಳಿದರು.
ಬೆಳಗ್ಗೆ 11 ಗಂಟೆಗೆ ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ, ಸಮ್ಮೇಳನ ಉದ್ಘಾಟಿಸುವರು. ಮಾಯಕೊಂಡ ಶಾಸಕ ಪ್ರೋ.ಎನ್.ಲಿಂಗಣ್ಣ ಅಧ್ಯಕ್ಷತೆ ವಹಿಸುವರು. ರೇವಣಸಿದ್ಧೇಶ್ವರ ಸ್ಮಾರಕ ಮಹಾದ್ವಾರವನ್ನು ಸಂಸದ ಜಿ.ಎಂ.ಸಿದ್ದೇಶ್ವರ್, ಸಿದ್ಧಗಂಗಾ ಶಿವಕುಮಾರ ಮಹಾಸ್ವಾಮಿಗಳ ಮಹಾಮಂಟಪವನ್ನು ಶಾಸಕ ಎಸ್.ಎ.ರವೀಂದ್ರನಾಥ್, ಟಿ.ಗಿರಿಜಾ ಸ್ಮಾರಕ ವೇದಿಕೆಯನ್ನು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು.

       ಸಾಹಿತ್ಯ ಚಟುವಟಿಕೆಗಳ ಉದ್ಘಾಟನೆಯನ್ನು ಹಿರಿಯ ಸಾಹಿತಿ ನಾಡೋಜ ಡಾ.ಹಂ.ಪ.ನಾಗರಾಜಯ್ಯ ನೆರವೇರಿಸಲಿದ್ದಾರೆಂದು ಮಾಹಿತಿ ನೀಡಿದರು. ಮಧ್ಯಾಹ್ನ 1 ಗಂಟೆ ಹಾಗೂ 2.30ಕ್ಕೆ ಸಾಹಿತ್ಯಕ ವಿಚಾರ ಗೋಷ್ಠಿ ಜರುಗಲಿವೆ. ಸಂಜೆ 4 ಗಂಟೆಗೆ ಕವಿಗೋಷ್ಠಿ ನಡೆಯಲಿದೆ. ಸಂಜೆ 5 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಬಹಿರಂಗ ಅಧಿವೇಶನದಲ್ಲಿ ಇ.ಎಂ.ಮಂಜುನಾಥ್ ನಿರ್ಣಯ ಮಂಡಿಸುವರು.

         ಸಂಜೆ 6 ಗಂಟೆಗೆ ಹೆಬ್ಬಾಳ್ ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಮಾರೋಪ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ಪ್ರೋ.ಎಲ್.ಎನ್.ಮುಕುಂದರಾಜ್ ಸಮಾರೋಪ
ನುಡಿಗಳನ್ನಾಡಲಿದ್ದಾರೆ.

         ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿವೆ ಎಂದು ಅವರು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಎಸ್.ಬಸವಂತಪ್ಪ, ಎ.ಆರ್.ಉಜ್ಜನಪ್ಪ, ಸಾಲಿಗ್ರಾಮ ಗಣೇಶ ಶೆಣೈ, ಎಸ್.ಎಂ.ಮಲ್ಲಮ್ಮ, ಕೆ.ರವಿ, ಆವರಗೆರೆ ರುದ್ರಮುನಿ, ರಾಘವೇಂದ್ರ ನಾಯರಿ, ಬಿ.ದಿಳ್ಳೆಪ್ಪ ಮತ್ತಿತರರು ಹಾಜರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap