ದಾವಣಗೆರೆ:
ಜಿಲ್ಲೆಯ ಜಗಳೂರು ನಗರದ ವಿವಿಧೆಡೆ ದಾಳಿ ನಡೆಸಿರುವ ಜಿಲ್ಲಾ ಮತ್ತು ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳ ಒಟ್ಟು 15 ಪ್ರಕರಣ ದಾಖಲಿಸಿ, 1250 ರೂ. ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 14 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 01 ಪ್ರಕರಣ ಸೇರಿದಂತೆ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ, ರೂ. 1250/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.
ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರಾಜ್, ಪಟ್ಟಣ ಪಂಚಾಯತ್‍ನ ಮುಖ್ಯಾಧಿಕಾರಿ ಕಂಪಳಮ್ಮ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ., ಹಿರಿಯ ಆರೋಗ್ಯ ಸಹಾಯಕ ಪರುಶುರಾಮ್, ಪಟ್ಟಣ ಪಂಚಾಯಿತಿಯ ಆರೋಗ್ಯ ನಿರೀಕ್ಷಕ ಕಿಪಾಯತ್ ಆಹ್ಮದ್, ಕಿರಿಯ ಆರೋಗ್ಯ ಸಹಾಯಕ ಸೋಮಶೇಖರ, ಜಗಳೂರು ಪೊಲೀಸ್ ಠಾಣೆಯ ಮುಖ್ಯ ಪೇದೆ ಕಾಟಪ್ಪ ಸೇರಿದಂತೆ ಇತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
