ಕುಣಿಗಲ್
ಭಾರತದ ಪ್ರಧಾನ ಮಂತ್ರಿಯಾಗಿ 2ನೇ ಬಾರಿಗೆ ನರೇಂದ್ರಮೋದಿ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಮಾಜಿ ಪ್ರಧಾನ ಮಂತ್ರಿ ಅಟಲ್ಬಿಹಾರಿ ವಾಜಪೇಯಿ, ನೂತನ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಗಳು ಹಾಗೂ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಉಚಿತ ಟೀ ವಿತರಣೆ ಹಾಗೂ ಸಿಹಿ ವಿತರಿಸಿ ಅರ್ಧ ಗಂಟೆಗೂ ಹೆಚ್ಚು ಒತ್ತು ಬಾರಿ ಸದ್ದಿನ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇದೇ ರೀತಿ ತಾಲ್ಲೂಕಿ ಹುಲಿಯೂರುದುರ್ಗ, ಅಮೃತೂರು, ಎಡೆಯೂರು ಸೇರಿದಂತೆ ತಾಲ್ಲೂಕಿನಾದ್ಯಂತ ಬಿಜೆಪಿ ಪಕ್ಷದ ಕಾರ್ಯಕರ್ತರು ಕೇಂದ್ರದಲ್ಲಿ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸನ್ನಿವೇಶವನ್ನ ಸಂಭ್ರಮ ಸಡಗರದೊಂದಿಗೆ ಆಚರಿಸುವುದರ ಜೊತೆಗೆ ತಮ್ಮ ತಮ್ಮ ಇಷ್ಟ ದೇವತೆಗಳ ಸನ್ನಿಧಿಯಲ್ಲಿ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳುವ ಮೂಲಕ 2ನೇ ಅವಧಿಗೆ ಪ್ರಧಾನಮಂತ್ರಿ ಪಟ್ಟಕ್ಕೇರಿದ ನರೇಂದ್ರ ಮೋದಿಯವರಿಗೆ ಜೈಕಾರ ಹಾಕುವ ಮೂಲಕ ಶುಭಕೋರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








