ಶಿಕ್ಷಕರಿಂದ ದೇಶಕ್ಕೆ ಉತ್ತಮ ಕೊಡುಗೆ

ಮಧುಗಿರಿ

    ಶಿಕ್ಷಕರು ಉತ್ತಮ ಆಡಳಿತಗಾರರನ್ನು, ರಾಜಕಾರಣಿಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆ ಉತ್ತಮಗೊಳ್ಳಲು ಶಿಕ್ಷಣ ಅತ್ಯಗತ್ಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.

    ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ರವರ 133 ನೆ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದು, ನಿಮ್ಮ ಕರ್ತವ್ಯದಲ್ಲಿ ಪ್ರಾಮಾಣಿಕತೆ ಜವಾಬ್ದಾರಿ ಇರಲಿ ಎಂದರು.

    ಅನೇಕ ಕಷ್ಟ ಸಮಸ್ಯೆಗಳ ನಡುವೆಯೂ ಶಿಕ್ಷಕರು ಶಾಲೆಗಳಲ್ಲಿ ಪಾಠ ಮಾಡಿ ಮಕ್ಕಳಿಗೆ ಪ್ರೇರಣೆ ನೀಡುತ್ತಿದ್ದಾರೆ. ನಿಮ್ಮ ಸೇವೆ ಬಹಳ ಶ್ರೇಷ್ಠವಾದುದು. ಕಾಯಾ, ವಾಚಾ, ಮನಸಾ ಶಿಕ್ಷಕರು ಕೆಲಸ ಮಾಡುತ್ತಿದ್ದು, ಮಧುಗಿರಿ ಶೈಕ್ಷಣಿಕ ಜಿಲ್ಲೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತಾರೆಂಬ ವಿಶ್ವಾಸ ನನಗಿದೆ ಎಂದರು.

    ಜಿ.ಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಚೌಡಪ್ಪ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಹೊಂದಿರುವ ವ್ಯಕ್ತಿಗಳಾಗಿರುತ್ತಾರೆ. ಭಾರತ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ದಿ ಹೊಂದಬೇಕಾದರೆ ಶಿಕ್ಷಣವೇ ಮುಖ್ಯ ಕಾರಣ. ಯಾವುದೇ ಸರ್ಕಾರ ಬಂದರೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಸರ್ಕಾರ ನೀಡುವ ಸವಲತ್ತುಗಳನ್ನು ಶಿಕ್ಷಕರು ವಿದ್ಯಾರ್ಥಿಗಳಿಗೆ ತಲುಪಿಸಬೇಕು ಎಂದರು.

    ಡಿ.ಡಿ.ಪಿ.ಐ ಎಂ.ರೇವಣಸಿದ್ದಪ್ಪ ಮಾತನಾಡಿ, ಸಮಾಜದ ದೃಷ್ಟಿ ಶಿಕ್ಷಕರ ಕಡೆಗಿದ್ದು, ಉತ್ತಮ ನಡೆ ನುಡಿಗಳನ್ನು ಜೀವನದಲ್ಲಿ ರೂಢಿಸಿಕೊಂಡು ಕರ್ತವ್ಯ ನಿರ್ವಹಿಸುವಂತೆ ಕರೆ ನೀಡಿದರು. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಗಳಿಗೆ ಪ್ರಶಸ್ತಿ ಪತ್ರ ನೀಡಿ, ಗೌರವಿಸಲಾಯಿತು ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಜಿ.ಪಂ ಸದಸ್ಯ ಕೆಂಚಮಾರಯ್ಯ, ತಹಸೀಲ್ದಾರ್ ಡಾ.ವಿಶ್ವನಾಥ್, ತಾ.ಪಂ ಇಓ ದೊಡ್ಡಸಿದ್ದಯ್ಯ, ಸಿ.ಪಿ.ಐ ಎಂ.ಎಸ್. ಸರ್ದಾರ್, ಮುಖ್ಯಾಧಿಕಾರಿ ಅಮರನಾರಾಯಣ, ಪುರಸಭಾ ಸದಸ್ಯ ಕೆ.ನಾರಾಯಣ್, ಎಂ.ಎಲ್ ಗಂಗರಾಜು, ಡಯಟ್ ಪ್ರಾಂಶುಪಾಲ ವೈ.ಎನ್.ರಾಮಕೃಷ್ಣಯ್ಯ, ಬಿ.ಇ.ಓ ಎಚ್.ಆರ್ ಆನಂದಕುಮಾರ್, ಶಿಕ್ಷಣಾಧಿಕಾರಿ ಅಶ್ವತ್ಥನಾರಾಯಣ, ಕ.ರಾ.ಸ.ನೌ ಸಂಘ ಅಧ್ಯಕ್ಷ ವಿ.ಎಚ್.ವೆಂಕಟೇಶಯ್ಯ, ಉಪನ್ಯಾಸಕರ ಸಂಘದ ಅಧ್ಯಕ್ಷ ರಂಗಪ್ಪ ಹಾಗೂ ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮುಂತಾದವರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link