ಜು. 9ಕ್ಕೆ ಜಿಲ್ಲಾ ಕೇಂದ್ರದಲ್ಲಿ ಶಿಕ್ಷಕರ ಸಾಮೂಹಿಕವಾಗಿ ಪ್ರತಿಭಟನೆ : ಎ. ಶ್ಯಾಮಣ್ಣ

ಜಗಳೂರು:

    ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಘದ ಸೂಚನೆಯ ಮೇರೆಗೆ ಜು. 9 ರಂದು ತಾಲೂಕಿನ ಶಿಕ್ಷಕರು ಸಾಮೂಹಿಕವಾಗಿ ಶಾಲೆಗಳಿಗೆ ರಜೆ ಹಾಕಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎ. ಶ್ಯಾಮಣ್ಣ ತಿಳಿಸಿದರು.

      ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು. ಶಿಕ್ಷಕರು ಸಮಾಜ ಮುಖಿಯಾಗಿ ಸೌಲಭ್ಯಗಳ ಕೊರತೆ ಇದ್ದರು ಸಹ ಉತ್ತಮವಾಗಿ ಕೆಲಸ ಮಾಡಿಕೊಂಡು ಹೊಗುತ್ತಿದ್ದೇವೆ. ಆದರೆ ಸರಕಾರ ನಮ್ಮ ಬೇಡಿಕೆಗಳನ್ನು ಹಿಡೇರಿಸುವಲ್ಲಿ ವಿಳಂಬ ದೊರಣೆ ತೋರುತ್ತಿದ್ದಾರೆ .

      ಸಂಘದ ಸೂಚನೆಯಂತೆ ನಾವು ಜು.9 ರಂದು ತಾಲೂಕಿನ 670 ಶಿಕ್ಷಕರು ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮನವಿಸಲ್ಲಿಸಲಾಗುವುದು ನಮ್ಮ ಪ್ರತಿಭಟನೆಗೆ ಸರಕಾರ ಸ್ಪಂದಿಸದೇ ಇದ್ದರೇ ಸೆ.5 ರಂದು ಶಿಕ್ಷಕರ ದಿನಾಚರಣೆಯಂದು ಬೆಂಗಳೂರು ಚೆಲೋ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

     ಪ್ರಧಾನ ಕಾರ್ಯ ದರ್ಶಿ ವೀರೇಶ್ ಮಾತನಾಡಿ ಹಾಲಿ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವಿಧರ ಶಿಕ್ಷಕರೆಂದು ಪರಿಗಣಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದಗೊಳಿಸಬೇಕು , ಶಾಲೆಗಳಲ್ಲಿ ಎಲ್ ಕೆ ಜಿ , ಯುಕೆಜಿ ಆರಂಬಿಸಬೇಕು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳಲ್ಲಿರುವ ನ್ಯೂನತೆ ಸರಿಪಡಿಸಿ, ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು, ಶಿಕ್ಷಕ ವಿದ್ಯಾರ್ಥಿ ಅನುಪಾತ ಗುರುತಿಸುವಾಗ ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರುಗಳನ್ನು ಹೊರತು ಪಡಿಸಿ ಹಾಗೂ ಮಾಧ್ಯಮವಾರು ,ಪ್ರದೇಶಿಕವಾರು ವಿಶೇಷ ನಿಯಮಗಳನ್ನು ರೂಪಿಸಿ, ಹೆಚ್ಚುವರಿ ಪ್ರಕ್ರಿಯೆಗಳನ್ನು ಮಾಡಬೇಕು, ಆರನೆ ವೇತನ ಆಯೋಗದ ಅಂತಿಮ ವರಧಿಯ ಶಿಫಾರಸ್ಸಿನ ಪ್ರಕಾರ ಮುಖ್ಯಗುರುಗಳಿಗೆ 10,15,20,25,30 ವರ್ಷದ ಬಡ್ತಿಗಳನ್ನು ನೀಡಬೇಕು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪ ನಿರ್ಧೇಶಕರ ಹುದ್ದೆಯವರೆಗೂ ಬಡ್ತಿಯನ್ನು ನೀಡಬೇಕು, ಗ್ರಾಮೀಣ ಕೃಪಾಂಕ ಶಿಕ್ಷಕರ/ನೌಕರರ ಸಮಸ್ಯೆಗಳನ್ನು ನಿವಾರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

       ಈ ಸಂದರ್ಭದಲ್ಲಿ ಜಿಲ್ಲಾ ಖಜಾಂಚಿ ಕೆ.ಶಿವಮೂರ್ತಿ, ಪದವಿಧರ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಂದ್ರಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಹೆಚ್.ಖೈರುನ್ನೀಸಾ, ಉಪಾಧ್ಯಕ್ಷೆ ಏಕಾಂತಮ್ಮ, ಸಹಕಾರ್ಯದರ್ಶಿ ಕೃಷ್ಣಪ್ಪ , ಅಂಬುಜ, ಮಂಜುನಾಥ, ಶಕುಂತಲಮ್ಮ, ಸಾವಿತ್ರಾಭಾಯಿ ಪುಲೆ, ಎನ್.ಪಿ.ಎಸ್.ಬಣಕಾರ, ಮಾರಪ್ಪ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap