ತಂಬಾಕು ಮುಕ್ತ ಸಮಾಜಕ್ಕಾಗಿ ಸಹಿ ಆಂದೋಲನ

ಚಿತ್ರದುರ್ಗ :

     ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಚಿತ್ರದುರ್ಗ ನಗರದಲ್ಲಿ ವಿವಿಧೆಡೆ ಸಹಿ ಆಂದೋಲನ ಕೈಗೊಂಡಿದ್ದು, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಆಂದೋಲನಕ್ಕೆ ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

      ಚಿತ್ರದುರ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಚಿತ್ರದುರ್ಗ, ಇವರುಗಳ ಸಂಯುಕ್ತಾಶ್ರಯದಲ್ಲಿ ಸಹಿ ಆಂದೋಲನ ಹಮ್ಮಿಕೊಳ್ಳಲಾಯಿತು.

       ತಂಬಾಕು ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರು ಫಲಕದ ಮೇಲೆ ಸಹಿ ಮಾಡುವ ಮೂಲಕ ಆಂದೋಲನಕ್ಕೆ ಚಾಲನೆ ನೀಡಿದರು. ನಂತರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಕಛೇರಿ ಆವರಣ ಮತ್ತು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ನೇತೃತ್ವದೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

      ಈ ಮೂಲಕ ಅಲ್ಲಿನ ಸಿಬ್ಬಂದಿಗಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ಸಹಿಗಳನ್ನು ಸಂಗ್ರಹಿಸುವ ಮೂಲಕ ತಂಬಾಕು ಮುಕ್ತ ಪೀಳಿಗೆಗೆ ಪ್ರತಿಜ್ಞೆ ಮತ್ತು ಬೆಂಬಲವನ್ನು ನೀಡುವಂತೆ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link