ಬೆಂಗಳೂರು:
ಚಂದನವನದ ಹೆಸರಾಂತ ನಟ ಚಿರಂಜೀವಿ ಸರ್ಜಾ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಇದೇ ಕಾರಣಕ್ಕಾಗಿ ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಹೃದಯಾಘಾತದಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ತಿಲಕ್ ನಗರದ ಸಾಗರ್ ಅಪೋಲೊ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಸರ್ಜಾಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು.
ಚಿರಂಜೀವಿ ಸರ್ಜಾ ವಾಯುಪುತ್ರ ಮೂಲಕ ಚಿತ್ರರಂಗವನ್ನು ಪ್ರವೇಶಿದ್ದರು. ದಂಡಂ ದಶಗುಣಂ, ವರದ ನಾಯಕ, ಸಿಂಗ ಸೇರಿ 25ಕ್ಕೂ ಹೆಚ್ಚು ಕನ್ನಡ ಸಿನೆಮಾಗಳಲ್ಲಿ ನಟಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ