ರಾಜಕೀಯ ದುರುದ್ದೇಶದಿಂದ ಡಿಕೆಶಿ ಮೇಲೆ ದಾಳಿ

ಚಿತ್ರದುರ್ಗ

    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಮ್ಮ ಪಕ್ಷದ ನಾಯಕರಾಗಿರುವ ಶಿವಕುಮಾರ್ ಅವರು ಇಂತಹ ಯಾವುದೇ ಬೆದರಿಕೆಗಳಿಗೆ ಹೆದರುವ ವ್ಯಕ್ತಿಯಲ್ಲ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಉಪಾಧ್ಯಕ್ಷ ಎ.ಜಾಕೀರ್ ಹುಸೇನ್ ಹೇಳಿದ್ದಾರೆ

    ಶಿವಕುಮಾರ್ ಅವರು ಯಾವುದೇ ಭ್ರಷ್ಟಾಚಾರ ಮಾಡಿರುವುದಿಲ್ಲ. ಯಾರಿಗೋ ಮೋಸ ಮಾಡಿರವುದಿಲ್ಲ. ರಾಜಕೀಯ ದುರುದ್ದೇಶದಿಂದ ಅವರ ಮೇಲೆ ಪದೇ ಪದೇ ಇಂತಹ ದಾಳಿಗಳು ನಡೆಯುತ್ತಿವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ
ಕಾಂಗ್ರೆಸ್ ಪಕ್ಷದ ನಾಯಕರುಗಳನ್ನು ಮಾತ್ರ ಗುರಿಯಿಟ್ಟುಕೊಂಡು ದಾಳಿ ಮಾಡುವುದು ಸರಿಯಾದ ಕ್ರಮವಲ್ಲ.

    ದೇಶದಲ್ಲಿ ಮತ್ತು ಕರ್ನಾಟಕದಲ್ಲಿ ಇತರೆ ಯಾವುದೇ ಪಕ್ಷದ ನಾಯಕರು, ಮಂತ್ರಿಗಳು ಮತ್ತು ಮಾಜಿ ಮಂತ್ರಿಗಳು ವ್ಯವಹಾರ ನಡೆಸುತ್ತಿಲ್ಲವೇ ? ಅವರ ಮೇಲೆ ಏಕೆ ದಾಳಿಗಳು ನಡೆಯುತ್ತಿಲ್ಲವೆಂಬುದು ಜನರಿಗೆ ಗೊತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಕುಗ್ಗಿಸುವ ಪ್ರಯತ್ನಗಳು ಇತ್ತೀಚಿನ ಕೆಲವು ದಿನಗಳಲ್ಲಿ ನಡೆಯುತ್ತಿರುವುದು ಗೊತ್ತಿರುವ ಸಂಗತಿಯೇ ಆಗಿದೆ. ಉಪ ಚುನಾವಣೆ ನಡೆಯುತ್ತಿರುವ ಇಂತಹ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಮೇಲೆ ದಾಳಿ ನಡೆಸಿರುವುದು ಮತ್ತು ಅವರಿಗೆ ಅನಗತ್ಯವಾಗಿ ಕಿರುಕುಳ ನೀಡುವುದನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ಹೇಳಿದ್ದಾರೆ

    ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರವೇ ಇದ್ದರೋ ಅಭಿವೃದ್ದಿಯಾಗುತ್ತಿಲ್ಲ. ಜನರ ಆಶೋತ್ತರಗಳನ್ನು ಈಡೇರಿಸಲು ಈ ಸರ್ಕಾರಗಳು ವಿಫಲವಾಗಿವೆ. ಚುನಾವಣೆಯನ್ನು ವಾಮ ಮಾರ್ಗದಲ್ಲಿ ಗೆಲ್ಲುವ ಕನಸು ಕಂಡಿರುವ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಕರ್ನಾಟಕದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ. ಜನರು ಸಹ ಈಗ ಬುದ್ದಿವಂತರಾಗಿದ್ದು, ಸರ್ಕಾರದ ಆಡಳಿತದಿಂದ ಬೆಸೆತ್ತಿದ್ದಾರೆ. ಚುನಾವಣೆಯಲ್ಲಿ ಸೋಲಿಸುವ ಮೂಲಕ ಜನರು ಸ್ಪಷ್ಟ ಸಂದೇಶವನ್ನು ನೀಡಲಿದ್ದಾರೆ ಎಂದು ಎ.ಜಾಕೀರ್ ಹುಸೇನ್ ತಿಳಿಸಿದ್ದಾರೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap