ನವದೆಹಲಿ:
ಸದ್ಯ ರಾಜ್ಯದ ಜನರ ಗಮನ ಮತ್ತು ರಾಜಕೀಯ ಸಂಚಲನ ಮೂಡಿಸಿದ್ದ ಡಿಕೆಶಿ ಬಂಧನ ಪ್ರಕರಣದಲ್ಲಿ ಶಿವಕುಮಾರ್ ಅವರನ್ನು ಅಕ್ಟೋಬರ್ 1ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ದೆಹಲಿ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.ಇದಲ್ಲದೆ ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿದೆ ೆಂದು ಕೋರ್ಟ್ ಮೂಲಗಳು ತಿಳಿಸಿವೆ.
ಡಿಕೆ ಶಿವಕುಮಾರ್ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ವಿಶೇಷ ನ್ಯಾಯಾಲಯದ ಮುಂದೆ ಆರೋಪಿಯನ್ನು ಹಾಜರುಪಡಿಸಿದರು. ಡಿಕೆಶಿ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಅಲ್ಲದೆ 14 ದಿನಗಳ ಕಾಲ ಡಿಕೆಶಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ನ್ಯಾಯಾಧೀಶರು ಆದೇಶ ನೀಡಿದರು. ಆದರೆ, ಅನಾರೋಗ್ಯದಿಂದ ಬಳಲುತ್ತಿರುವ ಡಿಕೆಶಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಅನುಮತಿ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








