ಪಾಕ್ ಪರ ಘೋಷಣೆ ಪ್ರಕರಣ : ಮಾ.9ಕ್ಕೆ ಜಾಮೀನು ಅರ್ಜಿ ವಿಚಾರ

ಹುಬ್ಬಳ್ಳಿ

     ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಜಾಮೀನು ಅರ್ಜಿಯ ತೀರ್ಪನ್ನು ನ್ಯಾಯಾಲಯ ಕಾಯ್ದಿರಿಸಿದೆ. ಎಲ್ಲಾ ಆರೋಪಿಗಳು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ.

    ಹುಬ್ಬಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕೆ. ಎನ್. ಗಂಗಾಧರ ಅವರು ಗುರುವಾರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದರು. ಮಾರ್ಚ್ 9ಕ್ಕೆ ಆದೇಶವನ್ನು ಕಾಯ್ದಿರಿಸಿದರು.ಹುಬ್ಬಳ್ಳಿ ಕೆಎಲ್‌ಇ ಇಂಜಿನಿಯರಿಗ್ ಕಾಲೇಜಿನ ವಿದ್ಯಾರ್ಥಿಗಳಾದ ಅಮೀರ್ ವಾನಿ, ತಾಲಿಬ್ ಮಜೀದ್ ಮತ್ತು ಬಾಸಿತ್ ಸೋಫಿ ವಿರುದ್ಧ ದೇಶದ್ರೋಹದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಎಲ್ಲಾ ಆರೋಪಿಗಳು ಬೆಳಗಾವಿ ಜೈಲಿನಲ್ಲಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ