ಕುತೂಹಲ ಕೆರಳಿಸಿದ ಹಾಲಿ ಮತ್ತು ಮಾಜಿ ಸಿಎಂಗಳ ಭೇಟಿ

ಬೆಂಗಳೂರು

     ಮೈತ್ರಿ ಸರ್ಕಾರ ಪತನಗೊಂಡು ಒಂದು ವರ್ಷವಾದ ಬಳಿಕ ಇದೇ ಮೊದಲ ಬಾರಿಗೆ ಮಹತ್ವದ ರಾಜಕೀಯ ಬೆಳವಣಿಕೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ ಅನುದಾನ ಹಂಚಿಕೆ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಿದರು.

   ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಳೆದೆರಡು ದಿನದಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆ ಆಗುತ್ತಿದ್ದು, ಪಕ್ಷದ ಶಾಸಕ ಮಂಜುನಾಥ್ ದಾಸರಹಳ್ಳಿ ಅವರ ಕ್ಷೇತ್ರದಲ್ಲಿಯೂ ಸಾಕಷ್ಟು ಹಾನಿ ಆಗಿದೆ. ತಾವು ಮುಖ್ಯಮಂತ್ರಿಯಾಗಿದ್ದಾಗ 515 ಕೋಟಿಯ ಯೋಜನೆಗೆ ಅನುಮೋದನೆ ಕೊಟ್ಟಿದ್ದೆ.ಆದರೆ ಈಗಿನ ಸರ್ಕಾರ ಕೇವಲ 16 ಕೋಟಿ ಮಾತ್ರ ನೀಡಿದೆ. ಹೀಗಾಗಿ ಮಳೆ ಅನಾಹುತ ನಿರ್ವಹಣೆ ಅಗತ್ಯ ನೆರವು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದರು.

   ಡ್ರಗ್ಸ್ ದಂಧೆ ವಿಚಾರವಾಗಿ ಸರ್ಕಾರ ತನಿಖೆ ನಡೆಸುತ್ತಿದ್ದು, ಇದರಲ್ಲಿ ಯಾರೇ ಇದ್ದರೂ ಸೂಕ್ತ ಕ್ರಮಜರುಗಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ತನಿಖೆಯಲ್ಲಿ ಈ ದಂಧೆಯಲ್ಲಿ ಯಾರು ಯಾರು ಭಾಗಿಯಾಗಿದ್ದಾರೆಂಬುದು ಪತ್ತೆಯಾಗಲಿದೆ ಎಂದು ಹೇಳಿದ ಕುಮಾರಸ್ವಾಮಿ, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ತಮಗೆ ಗೊತ್ತಿಲ್ಲ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap