ಅಭಿಪ್ರಾಯ ಸಂಗ್ರಹಿಸಿದ ನಂತರ ನಿರ್ಧಾರ : ಸುರೇಶ್ ಕುಮಾರ್

ಚಾಮರಾಜನಗರ:

      ಮುಂದಿನ ಶೈಕ್ಷಣಿಕ ವರ್ಷವನ್ನು ಯಾವಾಗ ಆರಂಭ ಮಾಡಬೇಕು ಎಂಬ ಬಗ್ಗೆ ಸರ್ಕಾರ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶುಕ್ರವಾರ ಸ್ಪಷ್ಟಪಡಿಸಿದರು.

     ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಶಾಲೆ ಪುನರಾರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ನಡೆಯುತ್ತಿದೆ. ಶನಿವಾರದವರೆಗೂ ಇದು ಮುಂದುವರಿಯಲಿದೆ. ಎಲ್ಲ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

     ಈ ವರ್ಷ ಶೂನ್ಯ ತರಗತಿ ಇರಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, ‘ಆ ರೀತಿ ಯಾರು ಹೇಳಿದ್ದಾರೆ ಎಂಬುದನ್ನು ತಿಳಿಸಿ, ಇಲಾಖೆ ಈ ಬಗ್ಗೆ ನಿರ್ಧಾರ ಕೈಗೊಂಡಿಲ್ಲ’ ಎಂದು ಹೇಳಿದರು.ಬೆಂಗಳೂರಿನಲ್ಲಿ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳಿಗೆ ಕೋವಿಡ್-19 ದೃಢಪಟ್ಟಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಕುಮಾರ್ ಅವರು, ‘ರೋಗ ಲಕ್ಷಣ ಇದ್ದ ವಿದ್ಯಾರ್ಥಿಗಳಿಗೆಲ್ಲ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು.

    ರೋಗ ಲಕ್ಷಣ ಇಲ್ಲದಿದ್ದರೂ ಸೋಂಕು ತಗುಲಿರುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಏನೂ ಮಾಡುವುದಕ್ಕಾಗುವುದಿಲ್ಲ. ಈ ಬಗ್ಗೆ ಪರಿಶೀಲಿಸುತ್ತೇನೆ. ಒಂದು ವೇಳೆ ದೃಢಪಟ್ಟಿದ್ದೇ ಆದರೆ, ಅಗತ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದರು.

ಸಾವಿನ ಪ್ರಮಾಣ: ‘ಕೋವಿಡ್‍ನಿಂದಾಗಿ ಬೆಂಗಳೂರಿನಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಸದ್ಯ ಶೇ 1.4 ಇದೆ. ಈ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಗಮನ ಹರಿಸಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link