ಇಲಾಖೆಗಳಲ್ಲಿ ಖರ್ಚಾಗದೆ ಉಳಿದ ಹಣ ಪ್ರವಾಹ ಪರಿಹಾರಕ್ಕೆ ಮೀಸಲು : ಸಿಎಂ

ಬೆಂಗಳೂರು:

     ಎಸ್ ಸಿ ಮತ್ತು ಎಸ್ ಟಿ ವಿಶೇಷ ಘಟಕ ಯೋಜನೆಯಲ್ಲಿ 2019-20ನೇ ಸಾಲಿನ 30,444.68 ಕೋಟಿ ರೂ ಅನುದಾನ ಹಂಚಿಕೆ ಮಾಡಲಾಗಿದ್ದು . ಆಗಸ್ಟ್ ತಿಂಗಳಾಂತ್ಯಕ್ಕೆ ಶೇ.18 ರಷ್ಟು ಪ್ರಗತಿಯಾಗಿದೆ ಮತ್ತು ಸದ್ಯದ ಪ್ರಗತಿ ನನಗೆ ಸಮಾಧಾನ ತಂದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

     ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಪರಿಷತ್ ಸಭೆಯ ಬಳಿಕ ಸುದ್ದಿಗಾರರೊ೦ದಿಗೆ ಮಾತನಾಡಿದ ಯಡಿಯೂರಪ್ಪ, ಎಸ್ ಸಿಪಿ/ಟಿಎಸ್ ಪಿ ಅನುದಾನ ಬಳಕೆಯಲ್ಲಿ ಶೇ.18ರಷ್ಟು ಪ್ರಗತಿ ಸಾಧಿಸಿರುವುದು ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ . 

    ಎಸ್.ಸಿ.ಪಿ/ ಟಿ.ಎಸ್.ಪಿ ಹಣದಲ್ಲಿ ಶೇ. 57% ರಷ್ಟನ್ನು ನೆರೆ ಸಂತ್ರಸ್ತ ಎಸ್ಸಿ‌/ಎಸ್ಟಿಗಳ ಸಮುದಾಯಗಳ ಮನೆ ನಿರ್ಮಾಣ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಬಳಸಲು ಸೂಚನೆ ನೀಡಲಾಗಿದೆ. 29 ಇಲಾಖೆಗಳಲ್ಲಿ ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ, ವಿವಿಧ ಇಲಾಖೆಗಳಲ್ಲಿ‌ ಖರ್ಚಾಗದೇ ಉಳಿದ ಹಣವನ್ನು ಪ್ರವಾಹ ಸಂತ್ರಸ್ತ ಜಿಲ್ಲೆಗಳ ಪರಿಶಿಷ್ಟ ಜಾತಿ/ಪಂಗಡಗಳ ಸಮುದಾಯಗಳಿಗೆ ಮನೆ ನಿರ್ಮಾಣಕ್ಕಾಗಿ ಬಳಸಿಕೊಳ್ಳಲು ಸಭೆಯಲ್ಲಿ ನಿರ್ಧರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

     1,150 ಕೋಟಿ ರೂ ವಿವಿಧ ಯೋಜನೆಗಳಡಿ ಖರ್ಚಾಗದೆ ಅನುದಾನ ಉಳಿದಿದ್ದು, ಈ ಹಣವನ್ನು ಪ್ರವಾಹ ಪೀಡಿತ ಜಿಲ್ಲೆ ಗಳಲ್ಲಿ ಪರಿಹಾರ ಕಾರ್ಯಗಳಿಗೆ ಬಳಕೆ ಮಾಡಿಕೊಳ್ಳಲು ಸಭೆ ಒಪ್ಪಿಗೆ ನೀಡಿದೆ ಎಂದರು. 

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link