ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 1,29,287 ಕ್ಕೆ ಏರಿಕೆಯಾಗಿದ್ದು, 53,648 ಮಂದಿ ಗುಣಮುಖರಾಗಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇಕಡ 41.5 ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ 13,85,552 ಆರ್‍ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗಿದ್ದು, 100 ಪರೀಕ್ಷೆಗಳಲ್ಲಿ ಸರಾಸರಿ 9 ಸೋಂಕು ಪತ್ತೆಯಾಗುತ್ತಿದೆ.
ಶೇಕಡ 78 ರಷ್ಟು ಸೋಂಕು ದೃಢಪಟ್ಟವರಿಗೆ ಯಾವುದೇ ಸೋಂಕಿನ ಗುಣ ಲಕ್ಷಣಗಳು ಇಲ್ಲದೆ ಇರುವುದು ಕಂಡುಬಂದಿದೆ. ಈ ಮಧ್ಯೆ ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸಲಾಗಿದ್ದು, ಸೋಂಕಿತರಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
