ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ : ಬಿ ಎಸ್ ವೈ

ಬೆಂಗಳೂರು

      ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬ ಧ್ಯೇಯದೊಂದಿಗೆ ಕಲ್ಯಾಣ ರಾಜ್ಯವನ್ನು ಕಟ್ಟುವುದೇ ನಮ್ಮ ಗುರಿ.ಕೋವಿಡ್-19 ಎಂಬ ಮಹಾ ಪಿಡುಗಿನ ವಿರುದ್ಧ ದ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸಿ ರಾಜ ಧರ್ಮ ಪಾಲನೆಗೆ ನಾವು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

     ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಧ್ವಜಾರೋಹಣ ಬಳಿಕ ಮಾತನಾಡಿದ ಅವರು,ಜನ ಸೇವೆಯೇ ಜನಾರ್ಧನ ಸೇವೆ,ಜನಹಿತ ವನ್ನು ಮನದಲ್ಲಿರಿಸಿ ಜನಪರ ತೀರ್ಮಾನಗಳನ್ನು ತೆಗೆದುಕೊಂಡಿ ದ್ದೇವೆ.ಈ ಎಲ್ಲಾ ತೀರ್ಮಾನಗ ಳಿಗೂ ನನ್ನ ರಾಜ್ಯದ ಜನರು ಸಂಪೂರ್ಣ ಬೆಂಬಲ ನೀಡಿ ಸಹಕರಿಸಿದ್ದೀರಿ.ಅದಕ್ಕಾಗಿ ನಾನು ತಮಗೆ ಅಭಾರಿಯಾಗಿದ್ದೇನೆ. ಕೋವಿಡ್-19 ಎಂಬುದು ಜಾಗತಿಕ ಪಿಡುಗಾಗಿದ್ದು ಎಲ್ಲಾ ಕ್ಷೇತ್ರಗಳನ್ನು ಬಾಧಿಸಿದೆ.ಲಾಕ್‍ಡೌನ್ ಕಾಲದಲ್ಲಿ ಮಂದಗತಿಯ ಜನ ಜೀವನ ಇಂದು ಚೇತರಿಸಿ ಕೊಳ್ಳುತ್ತಿದೆ. ಕೊರೊನಾ ಸೋಂಕಿನಿಂದ ಬಾಧಿತನಾಗಿ ಇದೀಗ ವೈದ್ಯಕೀಯ ಶುಶ್ರೂಷೆಯಿಂದ ಗುಣಮುಖ ನಾಗಿರುತ್ತೇನೆ.ಜನರು ಸೋಂಕಿನ ಬಗ್ಗೆ ಆತಂಕ, ಭಯಭೀತರಾಗುವ ಅಗತ್ಯವಿಲ್ಲ.ಜಾಗರೂಕ ತೆಯಿಂದ ಜೀವನ ನಡೆಸಬೇಕು ಎಂದು ಅವರು ಕರೆ ನೀಡಿದರು.

     ಉದ್ಯಮಿಗಳಿಗೆ ಅಗತ್ಯವಿರುವ ಭೂಮಿಯನ್ನು ಖರೀದಿಸುವುದಕ್ಕೆ ಪ್ರಸ್ತುತ ಇರುವ ನಿಯಮಾ ವಳಿಗಳನ್ನು ಸರಳೀಕರಿಸಲಾಗಿದೆ.ರೈತರು ಹಾಗೂ ಉದ್ಯಮಿ ಗಳಿಗೆ ಪರಸ್ಪರ ಲಾಭ ದೊರೆಯುವಂ ತೆ ಭೂಮಿಯನ್ನು ನೇರವಾಗಿ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.ರಾಜ್ಯಾದ್ಯಂತ ಉದ್ಯೋ ಗಾವಕಾಶಗಳನ್ನು ಸೃಜಿಸುವತ್ತ ಹೊಸ ಹೊಸ ಯೋಜನೆಗಳನ್ನು ರೂಪಿಸಲಾಗಿದೆ. ಸವಾಲುಗಳ ಎದುರು ಹಿಮ್ಮೆಟ್ಟದೆ,ನಾವು ಪ್ರಗತಿಯತ್ತ ಧೃಡ ಹೆಜ್ಜೆಗಳನ್ನು ಇಟ್ಟಿದ್ದೇವೆ. ಕಳೆದ ಒಂದು ವರ್ಷದಲ್ಲಿ ಹಲವು ಸಮಸ್ಯೆ ಮತ್ತು ಸವಾಲುಗಳ ನಡುವೆಯೂ ಪ್ರಗತಿ ಚಕ್ರವು ಚಲಿಸುವಂತೆ ನೋಡಿಕೊಂಡಿದ್ದೇವೆಂದು.ಆರ್ಥಿಕ ಹಿಂಜರಿ ಕೆ, ಉದ್ಯೋಗ ಕಡಿತ ಹಾಗೂ ಬೊಕ್ಕಸಕ್ಕೆ ರಾಜಸ್ವ ನಷ್ಟ, ಸ್ಥಬ್ಧವಾದ ಸಾಮಾಜಿಕ ಮತ್ತು ಆರ್ಥಿಕ ಚಟುವಟಿಕೆಗಳಿಂದಾಗಿ ಎಲ್ಲರೂ ಸಂಕಷ್ಟಕ್ಕೆ ಸಿಲುಕಿ ದ್ದಾರೆ ಎಂದು ಅವರು ತಿಳಿಸಿದರು.

    ಕೋವಿಡ್-19 ನಿರ್ವಹಣೆಗೆ ನಮ್ಮ ಸರ್ಕಾರ ಶ್ರಮಿಸಿದೆ. ಸಚಿವರ ಕಾರ್ಯಪಡೆ, ಪರಿಣಿತ ವೈದ್ಯರ ಕಾರ್ಯಪಡೆ ಮತ್ತು ಅಧಿಕಾರಿಗಳ ಕಾರ್ಯಪಡೆಗಳನ್ನು ರಚಿಸಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಲಾಗುತ್ತಿದೆ.ಕೊರೊನಾ ಹಿನ್ನೆಲೆಯಲ್ಲಿ ಉದ್ದಿಮೆ, ವ್ಯಾಪಾರ ಮತ್ತು ವಹಿವಾಟುಗಳು ಸ್ಥಗಿತ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರು ಹಾಗೂ ಕೂಲಿ ಕಾರ್ಮಿಕರು, ರೈತರು, ಪುಷ್ಪೋದ್ಯಮವನ್ನು ಅವಲಂಬಿಸಿದವರು,ನೇಕಾರರು ಮತ್ತು ಮೀನುಗಾರರು, ನಿರ್ಮಾಣ ವಲಯದ ಕಾರ್ಮಿಕರು, ಕ್ಷೌರಿಕರು ಮತ್ತು ಅಗಸರು, ಟ್ಯಾಕ್ಸಿ ಚಾಲಕರು ಮತ್ತು ಆಟೋ ಚಾಲಕರೂ ಒಳಗೊಂಡಂತೆ ವಿವಿಧ ವೃತ್ತಿಗಳನ್ನು ನಂಬಿ ಬದುಕು ನಡೆಸುತ್ತಿದ್ದ ಅಸಂಘಟಿತ ವಲಯದ ದುರ್ಬಲರ ನೆರವಿಗಾಗಿ ಒಟ್ಟು 3187 ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಲಾಗಿದೆ ಎಂದು ಅವರು ಹೇಳಿದರು.

    ಕೊರೋನ ನಿಯಂತ್ರಣಕ್ಕೆ ಶ್ರಮಿಸಿದ ಸರ್ಕಾರದ ಆಡಳಿತ ಯಂತ್ರ, ಸರ್ಕಾರೇತರ ಸಂಸ್ಥೆಗಳು, ಉದ್ಯಮಿಗಳು, ಸ್ವಯಂ ಸೇವಕರನ್ನು ಸ್ಮರಿಸುತ್ತೇನೆ.ವೈದ್ಯ ರು, ಶುಶ್ರೂಷಕರೂ ಒಳಗೊಂಡಂತೆ ಅರೆ ವೈದ್ಯಕೀಯ ಸೇವಾ ಸಿಬ್ಬಂದಿ ಹಾಗೂ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರವು ವಿಮಾ ಸೌಲಭ್ಯವನ್ನು ಘೋಷಿಸಿ ದೆ.ರಾಜ್ಯ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮ ಹಾಗೂ ಪ್ರಕಟಿ ಸಲಾದ ಪ್ಯಾಕೇಜ್‍ಗಳು ಈ ಸಾಂಕ್ರಾಮಿಕ ರೋಗ ತಂದೊಡ್ಡಿದ ಸಂಕಷ್ಟಗಳ ತೀವ್ರತೆ ಯನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ನುಡಿದರು.

    ನಮ್ಮ ಕರ್ನಾಟಕದಲ್ಲಿ ಕೊರೊನಾ ಹಾವಳಿಯ ನಡುವೆಯೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಮಾತ್ರವಲ್ಲದೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿ.ಇ.ಟಿ) ಯನ್ನೂ ಯಶಸ್ವಿಯಾಗಿ ನಡೆಸಿದ್ದೇವೆ.ಕೃಷಿಕ್ ಸಮ್ಮಾನ್ ಯೋಜನೆ ಅಡಿ ರೈತರಿಗೆ ಆರ್ಥಿಕ ನೆರವಿನ 2000 ರೂ.ಗಳ ಮೊದಲ ಕಂತನ್ನು ಈಗಾಗಲೇ ಬಿಡುಗಡೆಮಾಡಿದೆ.ಒಂದು ಸಾವಿರ ಕೋಟಿ ರೂ.ಮೊತ್ತವನ್ನು ಸುಮಾರು 50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತಿದೆ. ರಾಜ್ಯದಲ್ಲಿ 10 ಲಕ್ಷ ರೈತರಿಗೆ 6500 ಕೋಟಿ ರೂ. ಬೆಳೆ ಸಾಲ ನೀಡಿದ್ದು, ಅರ್ಹ ರೈತರಿಗೆ ಸಾಲ ದೊರೆಯಬೇಕೆಂಬ ನಿಟ್ಟಿನಲ್ಲಿ 14.50 ಸಾವಿರ ಕೋಟಿ ರೂಪಾಯಿ ಬೆಳೆ ಸಾಲವನ್ನು ನೀಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ ಎಂದರು.

     ರೈತರು ಉತ್ಪಾದಿಸಿದ 3175 ಕೋಟಿ ರೂ.ಮೌಲ್ಯದ ಹೆಸರುಕಾಳು, ತೊಗರಿ, ಶೇಂಗಾ, ಕಡಲೆಕಾಳು, ಕೊಬ್ಬರಿ ಇತ್ಯಾದಿ ಉತ್ಪನ್ನಗಳನ್ನು ಸುಮಾರು 5.82 ಲಕ್ಷ ರೈತರಿಂದ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಿ ಬೆಲೆ ಕುಸಿತದ ಸಂಕಷ್ಟದ ಸಂದರ್ಭದಲ್ಲಿ ನಮ್ಮ ಸರ್ಕಾರ ರೈತರ ನೆರವಿಗೆ ಧಾವಿಸಿದೆ.ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನೀತಿಯಲ್ಲಿ ಮಾರ್ಪಾಡು ತರಲಾಗಿದೆ.ಇದಲ್ಲದೆ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಉತ್ಪನ್ನಗಳಿಗೆ ವಿಧಿಸುತ್ತಿದ್ದ ಮಾರಾ ಟ ಕರ (ಶುಲ್ಕ) ವನ್ನು ಶೇಕಡಾ 1.50 ರಿಂದ ಶೇಕಡಾ 0.35 ಕ್ಕೆ ಇಳಿಸಿದ್ದೇವೆ.

   ಅಟಲ್ ಭೂ ಜಲ್ ಯೋಜನೆಯನ್ನು ರಾಜ್ಯದಲ್ಲಿ 1200 ಕೋಟಿ ರೂ ವೆಚ್ಚದ ಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ.ರಾಜ್ಯದ 14 ಜಿಲ್ಲೆಗಳ 41 ತಾಲ್ಲೂಕುಗಳ 1,199 ಗ್ರಾಮ ಪಂಚಾಯತಿಗಳಲ್ಲಿ 39,703 ಚದರ ಕಿ.ಮೀ ಪ್ರದೇಶ ವು ಈ ಯೋಜನೆಯ ವ್ಯಾಪ್ತಿಗೆ ಒಳಪಡುತ್ತದೆ.ಈ ಯೋಜನೆಯನ್ನು ಪ್ರಾಯೋಗಿಕವಾಗಿ ಮೊಟ್ಟಮೊದಲ ಬಾರಿಗೆ ಅನುಷ್ಠಾನಗೊಳಿಸುತ್ತಿರುವ ರಾಜ್ಯ ನಮ್ಮ ಕರ್ನಾಟಕವೆಂದು ಹೇಳಿದರು.

   ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಲಾಗಿದೆ.ಕೇವಲ ಹೆಸರು ಬದಲಾವಣೆ ಮಾತ್ರವಲ್ಲ ಈ ಭಾಗದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲು ಪೂರಕವಾಗುವಂತೆ 500 ಕೋಟಿ ರೂ. ಅನುದಾನದ ಯೋಜನೆ ಗಳನ್ನು ಹಮ್ಮಿಕೊಳ್ಳಲಾಗಿದೆ.ರಾಜ್ಯದಲ್ಲಿ ಕಲಬುರಗಿ, ಬೀದರ್ ವಿಮಾನ ನಿಲ್ದಾಣಗಳು ಕಾರ್ಯಾರಂಭ ಮಾಡಿವೆ. ಇದಲ್ಲದೆ, ಶಿವಮೊಗ್ಗ ಕಿರು ವಿಮಾನ ನಿಲ್ದಾಣ ಕಾಮಗಾರಿಗಳು ವೇಗ ಪಡೆದು ಕೊಂಡಿವೆ. ಕಾರವಾರ ಹಾಗೂ ವಿಜಯಪುರ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಆರಂಭಿಸಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾ ಗಿದೆ.ಕರ್ನಾಟಕ ಪ್ರವಾಸೋ ದ್ಯಮ ಕಾರ್ಯಪಡೆಯನ್ನು ರಚಿಸಲಾಗಿದೆ. ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಹಲವು ವಿನೂತನ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

   ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಕಾಯಿದೆ ಯೋಜನೆಯಡಿ ಪ್ರಸಕ್ತ ಸಾಲಿನ ಏಪ್ರಿಲ್ 1 ರಿಂದ ಈವರೆಗೆ 7.06 ಕೋಟಿ ಮಾನವ ದಿನಗಳನ್ನು ಸೃಜಿಸಿ, 1856 ಕೋಟಿ ರೂ ವೇತನವನ್ನು ಪಾವತಿಸಲಾಗಿದೆ.ಏಪ್ರಿಲ್ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 3.73 ಲಕ್ಷ ಕುಟುಂಬಗಳಿಗೆ ಹೊಸ ಜಾಬ್ ಕಾರ್ಡ್ ನೀಡಲಾಗಿದೆ.ಪ್ರಸಕ್ತ ವರ್ಷದ ಗುರಿಯಲ್ಲಿ ಶೇಕಡಾ 53 ರಷ್ಟು ಸಾಧನೆ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ದಾಖಲಾಗಿದೆ ಎಂದು ಅವರು ತಿಳಿಸಿದರು. ಬೆಂಗಳೂರಿನಲ್ಲಿ 400 ಕಿ.ಮೀ ಉದ್ದದ ರಾಜಕಾಲುವೆಗಳಿದ್ದು ,ನೀರ್ಗಾಲುವೆಗಳ ಹಸಿರೀಕರಣ, ಇಕ್ಕೆಲಗಳಲ್ಲಿ ಪಾದಚಾರಿ ಮತ್ತು ಬೈಸಿಕಲ್ ಪಥ ನಿರ್ಮಾಣ ಕ್ಕೆ ಯೋಜನೆಗಳನ್ನು ರೂಪಿಸಲಾಗಿದೆ. ಮೊದಲನೇ ಹಂತದಲ್ಲಿ ಧರ್ಮಾಂಬುಧಿ ಕೆರೆಯಿಂದ ಬೆಳ್ಳಂದೂರು ಕೆರೆವರೆಗೆ ಪಾರಂಪರಿಕ ರಾಜ ಕಾಲುವೆಯ ಹಸಿರೀಕರಣ ಮಾಡಿ 36 ಕಿ.ಮೀ. ಉದ್ದದ ಕಾಲ್ನಡಿಗೆ ಹಾಗೂ ಬೈಸಿಕಲ್ ಪಥ ನಿರ್ಮಾಣ ಮಾಡುವ ಮೂಲಕ ನಗರದ ಸಾಮಾಜಿಕ ಮತ್ತು ಸಾಂಸ್ಕೃತಿಕ ಸೌಂದರ್ಯಗಳನ್ನು ಉತ್ತಮಪಡಿಸಲು ಉದ್ದೇಶಿಸಲಾಗಿದೆ.

     ಬೈಯಪ್ಪನಹಳ್ಳಿ ಮೆಟ್ರೋ ಸ್ಟೇಷನ್ ಬಳಿ ಎನ್ ಜಿಇಎಫ್ ಸಂಸ್ಥೆಗೆ ಸೇರಿದ 110 ಎಕರೆ ಭೂಮಿ ಯನ್ನು ಗುರುತಿಸಿದ್ದು,ಈ ಪ್ರದೇಶ ವ್ಯಾಪ್ತಿಯಲ್ಲಿ ಜನಸ್ನೇಹಿ ಯೋಜನೆಗಳನ್ನು ರೂಪಿಸಲಾಗುತ್ತಿದೆ.ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-2 ನ್ನು ಒಟ್ಟು 30,695 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಿದ್ದು, 2024ರ ಜೂನ್ ವೇಳೆಗೆ ಪೂರ್ಣಗೊಳಿಸುವ ನಿರೀಕ್ಷೆಯಿದೆ ಎಂದು ಅವರು ವಿವರಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap