ಬೆಂಗಳೂರು:
ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಬಳಿ ಚರ್ಚೆ ಮಾಡುವುದಿಲ್ಲ. ವಿಧಾನ ಸಭೆ ಅಧಿವೇಶನ ಮುಗಿದ ಮೇಲೆ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ದೆಹಲಿಗೆ ತೆರಳುತ್ತಿರುವುದು ಪೂರ್ವ ನಿಗದಿತ ಕಾರ್ಯಕ್ರಮ ಹಾಗೂ ಅತಿವೃಷ್ಟಿ ಪರಿಹಾರ ಪಡೆಯುವ ಬಗ್ಗೆ ಚೆರ್ಚಿಸಲು. ಈ ನಡುವೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಾಚನೆ ಬಗ್ಗೆ ಹೈಕಮಾಂಡ್ ಜೊತೆ ಚೆರ್ಚೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.