ಬೆಂಗಳೂರು :
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 19ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ರಾಜ್ಯ ವಿಧಾನಸಭೆ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ.ಬಿಜೆಪಿಯ ಪ್ರಭಾಕರ ಕೋರೆ, ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್, ಎಂ.ವಿ. ರಾಜೀವ್ ಗೌಡ ಹಾಗೂ ಜೆಡಿಎಸ್ ನ ಡಿ. ಕುಪೇಂದ್ರರೆಡ್ಡಿ ಅವರ ನಿವೃತ್ತಿಯಿಂದ ತೆರವಾಗುತ್ತಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿಯೂ ಆದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ.
ಇಂದಿನಿಂದಲೇ ಉಮೇದುವಾರಿಕೆ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ಇದೇ 9 ಕಡೆಯ ದಿನವಾಗಿದೆ. ಮರುದಿನ ಪರಿಶೀಲನೆ ನಡೆಯಲಿದ್ದು, 12 ರಂದು ನಾಮಪತ್ರ ಹಿಂಪಡೆಯಲು ಕಡೆ ದಿನವಾಗಿದೆ.ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ