ಬೆಂಗಳೂರು
ಬಿಜೆಪಿ ಸರ್ಕಾರ ಜುಲೈ 27ಕ್ಕೆ ವರ್ಷ ಪೂರೈಸುತ್ತಿರುವ ನಡುವೆಯೇ ನಾಯಕತ್ವ ಬದಲಾವಣೆ ಚಟುವಟಿಕೆ ಆರಂಬವಾಗಿದೆ ಎನ್ನಲಾಗಿದೆ.ಸರ್ಕಾರದ ವಾರ್ಷಿಕ ಸಂಬ್ರಮಾಚರಣೆ ಕಾರ್ಯಕ್ರಮ ವನ್ನು ಬದಿಗೊತ್ತಿ ಪೂರ್ವನಿಗದಿತ ಕಾರ್ಯಕ್ರಮದ ನೆಪದಲ್ಲಿ ಲಕ್ಷ್ಮಣ್ ಸವದಿ ದೆಹಲಿ ತೆರಳಿದ್ದರು.ಜೊತೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ,ಕೇಂದ್ರದ ಗೃಹ ಸಚಿವ ಅಮಿತ್ ಷಾ ,ಕೇಂದ್ರ ಸಚಿವರನ್ನು ಬೇಟಿ ಮಾಡುತ್ತಿರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ.
ದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಲಕ್ಷ್ಮಣ್ ಸವದಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಸದಾನಂ ದಗೌಡ,ಹಾಗೂ ಸುರೇಶ್ ಅಂಗಡಿಅವರನ್ನು ಬೇಟಿ ಮಾಡಿದ್ದಾರೆ ಎನ್ನಲಾಗಿದೆ.ದೆಹಲಿಗೆ ಸಚಿವ ಜಗದೀಶ್ ಶೆಟ್ಟರ್ ತೆರಳಲಿದ್ದಾರೆ ಎಂಬ ಮಾಹಿತಿಯೂ ಇದೆ.ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ವೇದಿಕೆ ಸಿದ್ದವಾಗಿದೆ ಎನ್ನಲಾಗಿದೆ.
ಇತ್ತೀಚಗೆ ರಾಜ್ಯಪಾಲ ವಜೂಬಾಯಿ ವಾಲಾರನ್ನು ಲಕ್ಷ್ಮಣ್ ಸವದಿ ಭೇಟಿ ಮಾಡಿ ಚೆರ್ಚೆ ನಡೆಸಿದ್ದರು.ಬಳಿಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿಗೆ ಭೇಟಿ ನೀಡಿ ರಮೇಶ್ ಜಾರಕಿಹೊಳಿ,ಡಾ.ಸುಧಾ ಕರ್,ಸೇರಿದಂತೆ ರಾಜ್ಯದ ಪ್ರಮುಖ ಸಚಿವರನ್ನು ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇತ್ತೀಚಗೆ ರಾಜ್ಯ ಪ್ರವಾಸ ಕೈಗೊಂಡು ಎಸ್.ಟಿ.ಸೋಮಶೇಖರ್,ಸುಧಾಕರ್, ರಮೇಶ್ ಜಾರಕಿಹೊಳಿ,ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಇತರೆ ಸಚಿವರು ಹಾಗೂ ಪ್ರಮುಖ ನಾಯಕರ ನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ಬಗ್ಗೆ ಚೆರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.
ಲಿಂಗಾಯತ ಶಾಸಕರೇ ಮುಖ್ಯಮಂತ್ರಿ ವಿರುದ್ಧ ತಿರುಗಿ ಬಿದ್ದಿದ್ದು ಬಿಜೆಪಿಯ ಸಂಸದರು,ಶಾಸಕರೇ ಯಡಿಯೂರ ಪ್ಪ ನಾಯಕತ್ವ ಬದಲಾವಣೆಗೆ ಒತ್ತಡ ಹೇರಿದ್ದಾರೆ ಎಂಬ ಮಾಹಿತಿ ಕೇಳಿ ಬರುತ್ತಿದೆ.ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ವರ್ಷ ಪೂರೈಸಿದ ಬೆನ್ನಲ್ಲೆ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೂಚನೆ ಕಂಡು ಬರುತ್ತಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
