ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಸೂಲಿ.

ಚಳ್ಳಕೆರೆ

    ನಗರದ ಎಲ್ಲಾ ವಾರ್ಡ್‍ಗಳಲ್ಲಿ ಪ್ರತಿನಿತ್ಯವೂ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ಭಯಭೀತರಾಗಿದ್ದು, ಈ ರೋಗವನ್ನು ನಿಯಂತ್ರಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಸರ್ಕಾರ ಸೂಚನೆ ನೀಡಿದ್ದು, ಮಾಸ್ಕ್ ಧರಿಸದೇ ಓಡಾಡುವವರ ವಿರುದ್ದ ನಗರಸಭೆ ಜಾಗೃತಿ, ಎಚ್ಚರಿಕೆಯಲ್ಲದೆ ದಂಡವಿಧಿಸುವ ಮೂಲಕ ಮಾಸ್ಕ್ ಧರಿಸಿ ನಡೆಯಿರಿ ಎಂಬ ಅಭಿಯಾನವನ್ನು ಪ್ರಾರಂಭಿಸದೆ ಎಂದು ಪೌರಾಯುಕ್ತ ಪಿ.ಪಾಲಯ್ಯ ತಿಳಿಸಿದರು.

    ಅವರು, ಶನಿವಾರ ಬೆಳ್ಳಂಬೆಳಗ್ಗೆ ನಗರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಸಿಬ್ಬಂದಿಯೊಂದಿಗೆ ನಡುರಸ್ತೆಯಲ್ಲೇ ದ್ವಿಚಕ್ರವಾಹನ ಚಾಲಕರು ಹಾಗೂ ಸಾರ್ವಜನಿಕರು ಮಾಸ್ಕ್‍ಧರಿಸದೆ ಓಡಾಡುತ್ತಿದ್ದು, ಅವರೆಲ್ಲರಿಗೂ ಕಟ್ಟುನಿಟ್ಟಿನ ಸೂಚನೆ ನೀಡಿದರಲ್ಲದೆ, ಮಾಸ್ಕ್ ಧರಿಸದೆ ಓಡಾಟ ನಡೆಸಿದಲ್ಲಿ ಕೊರೋನಾ ಅಪಾಯದ ಎಚ್ಚರಿಕೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ದ್ವಿಚಕ್ರವಾಹನ ಚಾಲಕರಿಗೆ ದಂಡವನ್ನು ಸಹ ವಿಧಿಸಿದರು. ಈ ಕಾರ್ಯಕ್ರಮ ಪ್ರತಿನಿತ್ಯವೂ ಇಲ್ಲಿನ ನಗರಸಭೆ ಕಚೇರಿ ಮುಂಭಾಗದಲ್ಲೇ ನಡೆಸಲಾಗುವುದು. ಸುಮಾರು 100ಕ್ಕೂ ಹೆಚ್ಚು ಜನರಿಗೆ ಜಾಗೃತಿ ಮೂಡಿಸಿದ್ದಲ್ಲದೆ, 2000 ಹೆಚ್ಚು ದಂಡವನ್ನು ವಸೂಲಿ ಮಾಡಿರುವುದಾಗಿ ತಿಳಿಸಿದರು.

    ಹಿರಿಯ ಆರೋಗ್ಯ ನಿರೀಕ್ಷಕ ಮಹಲಿಂಗಪ್ಪ ಮಾತನಾಡಿ, ಕಳೆದ ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ನಗರಸಭೆ ಎಲ್ಲಾ ವಾಹನಗಳಲ್ಲೂ ಕೊರೋನಾ ವೈರಾಣು ಜಾಗೃತಿಯ ಬಗ್ಗೆ ಎಚ್ಚರಿಕೆ ನೀಡಲಾಗುತ್ತಿದೆ. ನಗರಸಭೆ ಆಡಳಿತ ನಿರಂತರವಾಗಿ ಮಾಸ್ಕ್ ಧರಿಸದೇ ಇರುವವರ ವಿರುದ್ದ ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದಂಡವನ್ನು ವಿಧಿಸುವ ಕುರಿತು ಚಿಂತನೆ ನಡೆಸಲಾಗುವುದು ಎಂದರು. ಕಿರಿಯ ಆರೋಗ್ಯ ನಿರೀಕ್ಷಕ ಗಣೇಶ್, ದಾದಾಪೀರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap