ಬೆಂಗಳೂರು
ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ ಲೈನ್ ಶಿಕ್ಷಣವನ್ನು ಕೂಡಾ ದುಡ್ಡುಮಾಡುವ ಹೊಸ ದಂಧೆಯಾಗಿ ಮಾಡಿಕೊಂಡಿವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಪ್ರಾಥಮಿಕ ಹಂತದಲ್ಲಿಯೇ ಶುರುವಾಗಿರುವ ಹಾವಳಿಯನ್ನು ಈ ಹಂತದಲ್ಲಿಯೇ ನಿಯಂತ್ರಿಸುವ ಕೆಲಸಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಕ್ಷಣ ಮುಂದಾಗಬೇಕು ಸಿದ್ದರಾಮಯ್ಯ ಟ್ವೀಟ್ ಮೂಲಕ ಸಲಹೆ ನೀಡಿದ್ದಾರೆ.
ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಕಾನೂನು ಬಾಹಿರವಾಗಿ ಬೋಧನಾ ಶುಲ್ಕವನ್ನು ಹೆಚ್ಚಿಸಿ, ವಿದ್ಯಾರ್ಥಿಗಳಿಂದ ವಸೂಲು ಮಾಡುತ್ತಿರುವ ದೂರುಗಳು ಬರುತ್ತಿವೆ. ತಕ್ಷಣ ಇತ್ತ ಗಮನಹರಿಸಿ ಶಿಕ್ಷಣ ಸಂಸ್ಥೆಗಳ ಲೂಟಿಯನ್ನು ನಿಲ್ಲಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ