ಮಹನೀಯರ ಜಯಂತಿ ಆಚರಣೆಗೆ ಸಿದ್ಧತೆ-ಸಂಗಪ್ಪ

ಚಿತ್ರದುರ್ಗ

    ಸಮಾಜ ಸುಧಾರಕರ ಹಾಗೂ ಸಾಧನೆ ಮಾಡಿದ ಮಹನೀಯರ ಜಯಂತಿ ಅರ್ಥಪೂರ್ಣವಾಗಿರಬೇಕು. ತೋರಿಕೆಗಿಂತ ಮಹನೀಯರ ಸಾಧನೆ ಅರಿಯುವುದು ಸೂಕ್ತ. ಇದರ ಚಿಂತನೆಯಡಿ ಮಹನೀಯರ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.

   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಮಹನೀಯರ ಜಯಂತಿ ಕುರಿತ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

   ಫೆ.15 ರಂದು ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಲಾಗುವುದು. ಮೆರವಣಿಗೆ ಬೆಳಿಗ್ಗೆ 10ಕ್ಕೆ ಆರಂಭವಾಗಿ ನೀಲಕಂಠೇಶ್ವರ ದೇವಸ್ಥಾನದಿಂದ ತರಾಸು ರಂಗಮಂದಿರದವರೆಗೆ ನಡೆಯುವುದು. ವೇದಿಕೆ ಕಾರ್ಯಕ್ರಮ ತರಾಸು ರಂಗಮಂದಿರದಲ್ಲಿ 12 ಗಂಟೆಗೆ ನಡೆಯಲಿದ್ದು ಸಾಹಿತಿಗಳಾದ ಮಂಜುನಾಥ್ ನಾಯ್ಕ್ ಉಪನ್ಯಾಸ ನೀಡುವರು.

   ಛತ್ರಪತಿ ಶಿವಾಜಿ ಜಯಂತಿಯನ್ನು ಫೆ.19 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಕ್ಕೆ ನಗರದ ಏಕನಾಥೇಶ್ವರಿ ಪಾದಗಟ್ಟೆಯಿಂದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ನಂತರ ಮಧ್ಯಾಹ್ನ 12 ಗಂಟೆಗೆ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.

   ಫೆ.20 ರಂದು ಕವಿ ಸರ್ವಜ್ಞ ಜಯಂತಿ ಆಚರಿಸಲಾಗುವುದು. ಬೆಳಿಗ್ಗೆ 10ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಗೌರಸಮುದ್ರ ಮಾರಮ್ಮ ದೇವಸ್ಥಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಮಧ್ಯಾಹ್ನ 12ಕ್ಕೆ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಪರಶುರಾಂಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಾಂತೇಶ್ ಉಪನ್ಯಾಸ ನೀಡುವರು.

    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ನಾಗೇಂದ್ರನಾಯ್ಕ್, ಜಿಲ್ಲಾ ಬಂಜಾರ ಸಮುದಾಯದ ಗೌರವಾಧ್ಯಕ್ಷ ರಾಜಾನಾಯ್ಕ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ನಾಯ್ಕ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಸತೀಶ್ ನಾಯ್ಕ್, ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸದಸ್ಯ ಸುರೇಶ್ ನಾಯ್ಕ್, ಮರಾಠ ಸಮಾಜದ ಅಧ್ಯಕ್ಷ ಸುರೇಶ್ ಜಾಧವ್, ಕಾರ್ಯದರ್ಶಿ ಗೋಪಾಲರಾವ್, ಕುಂಬಾರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹಪ್ಪ, ಕಾರ್ಯದರ್ಶಿ ಮೃತ್ಯುಂಜಯ ಸೇರಿದಂತೆ ಮೂರು ಸಮುದಾಯದ ಗಣ್ಯರ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link