ಬೆಂಗಳೂರು
ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದ್ದು, ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಕೊರೊನಾ ಸೋಂಕಿನ ನಡುವೆಯೂ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 66 ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇಕಡ 86.4 ರಷ್ಟು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇಕಡ 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು ಎಂದು ಗೋವಿಂದ್ ಕಾರಜೋಳ್ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








