ನಾಡ ಧ್ವಜ ಬದಲಾವಣೆ: ರಾಜ್ಯ ಸರ್ಕಾರದ ನಡೆ ಖಂಡನೀಯ .!

ಬೆಂಗಳೂರು
        ಕನ್ನಡ ಮತ್ತು ಸಂಸ್ಕೃತಿ ಸಚಿವರು ನಾಡಧ್ವಜ ಅಗತ್ಯ ಇಲ್ಲ ಎಂದು ಹೇಳಿ ಕನ್ನಡಿಗರನ್ನು ಕೆರಳಿಸಿರುವುದು ಸರಿ ಅಲ್ಲ. ಮಾಡಬೇಕಾಗಿರುವ ಕೆಲಸ ಬಿಟ್ಟು ಸಚಿವರು ಅನಗತ್ಯವಾಗಿ ವಿವಾದ ಸೃಷ್ಟಿಸಲು ಹೊರಟಂತಿದೆ.ಸಚಿವರು ತಕ್ಷಣ ತಮ್ಮ ಅಭಿಪ್ರಾಯವನ್ನು ಹಿಂದಕ್ಕೆ ಪಡೆದು ನಾಡಧ್ವಜವನ್ನು ಒಪ್ಪಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

      ಹಿರಿಯರಾದ ಡಾ.ಪಾಟೀಲ ಪುಟ್ಟಪ್ಪ ಮತ್ತಿತರ ಕನ್ನಡ ಹೋರಾಟಗಾರರು ನಾಡಧ್ವಜಕ್ಕಾಗಿ ಮನವಿ ಮಾಡಿದ್ದರು.ಈ ಬಗ್ಗೆ ಅಧ್ಯಯನ ನಡೆಸಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿದ್ದ ನಾಡಧ್ವಜಕ್ಕೆ ಮನ್ನಣೆ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೋರಿದ್ದೆವು. ಈಗ ರಾಜ್ಯ ಸರ್ಕಾರವೇ ವಿರೋಧಿಸುತ್ತಿರುವುದು ಖಂಡನೀಯ ಎಂದು ಅವರು ಟ್ವೀಟ್ ಮಾಡಿದ್ದಾರೆ.

      ನಾವು ನಮಗೊಂದು ನಾಡಗೀತೆಯನ್ನು ಒಪ್ಪಿಕೊಂಡಿಲ್ಲವೇ ? ಇದರಿಂದ ರಾಷ್ಟ್ರಗೀತೆಗೆ ಅವಮಾನ ಮಾಡಿದಂತಾಗುವುದೇ ?ರಾಷ್ಟ್ರಧ್ವಜದ ಕೆಳಗೆ ಬೇರೆ ಧ್ವಜ ಹಾರಿಸಬೇಕೆಂದು ರಾಷ್ಟ್ರಧ್ವಜ ಸಂಹಿತೆ ಹೇಳಿದೆ.ಅದನ್ನು ಪಾಲಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಬೇರೇನು ಸಮಸ್ಯೆ ಇದೆ ?ಎಂದು ಮತ್ತೊಂದು ಟ್ವೀಟ್‍ನಲ್ಲಿ ಅವರು ಪ್ರಶ್ನಿಸಿದ್ದಾರೆ.

     ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ನಾಡಧ್ವಜ ವಿರೋಧಿಸಿರುವುದು ಸರಿಯಲ್ಲ. ನಾವು ಪ್ರತ್ಯೇಕ ಧ್ವಜ ಕೇಳುತ್ತಿಲ್ಲ. ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ. ಸರ್ಕಾರದ ನಿಲುವು ಸ್ಪಷ್ಟವಾಗಿ ಕನ್ನಡ ವಿರೋಧಿಯಾದುದು ಎಂದು ಸಿದ್ದರಾಮಯ್ಯ ಟ್ವೀಟ್‍ನಲ್ಲಿ ತಿಳಿಸಿದ್ದಾರೆ

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap