ಅನರ್ಹರಿಗೆ ಮತದಾರರೆ ತಕ್ಕ ಪಾಠ ಕಲಿಸಲಿದ್ದಾರೆ : ರಾಮಲಿಂಗಾರೆಡ್ಡಿ

ಬೆಂಗಳೂರು

  ಅನರ್ಹ ಶಾಸಕರಿಗೆ ರಾಜ್ಯದ ಮತದಾರರೇ ತಕ್ಕ ಪಾಠ ಕಲಿಸಲಿದ್ದು 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹಿರಿಯ ಮುಖಂಡ ಹಾಗೂ ಶಾಸಕ ರಾಮಲಿಂಗಾರೆಡ್ಡಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

   ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ, ಪಕ್ಷದ ಪ್ರಮುಖ ನಾಯಕರೆಲ್ಲ ತಮ್ಮ ಅಭ್ಯರ್ಥಿಗಳ ಪರ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಇದು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

  ದಿನದಿಂದ ದಿನಕ್ಕೆ ಪ್ರಧಾನಿ ನರೇಂದ್ರಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರದ ಮೇಲಿನ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಇದು ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ ದೇಶದ ಜಿಡಿಪಿ ದರ 4.5ಕ್ಕೆ ಕುಸಿದಿದೆ. ಇದನ್ನು ಹೇಳಲು ಆರ್ಥಿಕ ತಜ್ಞರೇ ಬೇಕಾಗಿಲ್ಲ ಎಂದು ಹೇಳಿದ ಅವರು, ಆರ್ಥಿಕ ತಜ್ಞರ ಸಲಹೆ-ಸೂಚನೆಗಳನ್ನು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಪಡೆದಿದ್ದರೆ ದೇಶಕ್ಕೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

   ಲೋಕಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರಮೋದಿ, ದೇಶದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ಉದ್ಯೋಗ ಸೃಷ್ಟಿಗೆ ಒತ್ತು ನೀಡಿಲ್ಲ, ಇದರಿಂದ ಜನರೇ ಹತಾಶರಾಗಿದ್ದಾರೆ ಎಂದರು.

ಮತ್ತೊಮ್ಮೆ ಮೈತ್ರಿ

    ಉಪಚುನಾವಣೆ ಫಲಿತಾಂಶದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೊಮ್ಮೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ .ಈ ಸಂಬಂಧ ಎರಡೂ ಪಕ್ಷಗಳ ನಾಯಕರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿ ಅತಿವೃಷ್ಠಿ ಸಮಸ್ಯೆ ತಲೆದೋರಿದ್ದರೂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅದನ್ನು ನಿಬಾಯಿಸುವಲ್ಲಿ ವಿಫಲವಾಗಿದೆ ಎಂದು ಹೇಳಿದರು.

   ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ವೀಕ್ಷಕ ಸಂಜೀವ್ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಮಾಧ್ಯಮ ವಿಭಾಗದ ಎಂ. ರಾಮಚಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap