ಹುಬ್ಬಳ್ಳಿ:
ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಆಡಳಿತ ಬಿಜೆಪಿಯಲ್ಲೇ ಲಾಬಿ ಬಿರುಸುಗೊಂಡಿದೆ ಎಂದು ಜೆಡಿಎಸ್ ಹಿರಿಯ ನಾಯಕ, ಮಾಜಿ ಸಚಿವ ಬಸವರಾಜ ಹೊರಟ್ಟಿ ಹೊಸ ಬಾಂಬ್ ಸಿಡಿಸಿದ್ದಾರೆ.ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಬಹಳವಾಗಿ ನಡೆಯುತ್ತಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು, ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದು ಬಿ.ಎಸ್. ಯಡಿಯೂರಪ್ಪ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆಯಾಗುತ್ತಿದೆ. ಯಡಿಯೂರಪ್ಪನವರನ್ನ ಬದಲಾವಣೆ ಮಾಡುವ ಲಾಬಿ ಜೋರಾಗಿ ನಡೆಯುತ್ತಿದೆ.
ಮುಖ್ಯಮಂತ್ರಿ ಬದಲಾಗ್ತಾರೆ ಅನ್ನೋ ವಿಚಾರವನ್ನ ಬಿಜೆಪಿಯ ಹಿರಿಯ ಮುಖಂಡರೊಬ್ಬರು ನನಗೆ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗ್ತಾರೆ ಎನ್ನುವ ವಿಚಾರವಾಗಿ ನನ್ನ ಜೊತೆ ಬಿಜೆಪಿ ಮುಖಂಡರು ಚರ್ಚೆ ಮಾಡಿದ್ದಾರೆ ಎಂದು ಜೆಡಿಎಸ್ ಎಂಎಲ್ಸಿ ಹೇಳಿದ್ದಾರೆ.ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಬಿಎಸ್‌ವೈರನ್ನು ಭೇಟಿ ಆಗಿರಬೇಕು. ರಾಜ್ಯದ ಹಿತದೃಷ್ಟಿಯಿಂದ ಕುಮಾರಸ್ವಾಮಿಯವರು ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿದ್ದಾರೆ. ಯಡಿಯೂರಪ್ಪನವರು ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸಿದ್ದಾರೆ. ಮುಖ್ಯಮಂತ್ರಿಯಾಗಿ ಇದು ಅವರ ಕೊನೆಯ ಅವಧಿ. ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದು ಸರಿಯಲ್ಲ ಎಂದು ಮಾಜಿ ಸಚಿವರೂ ಆದ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ